ಕುಶಾಲನಗರ, ಜ. 6: ದಲಿತ ಸಂಘರ್ಷ ಸಮಿತಿ ಆಶ್ರಯದಲ್ಲಿ ಪಟ್ಟಣದ ಟೌನ್ ಕಾಲನಿಯ ಅಂಬೇಡ್ಕರ್ ಭವನದಲ್ಲಿ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ ನಡೆಯಿತು.

ಸಮಿತಿಯ ಜಿಲ್ಲಾ ಸಂಚಾಲಕ ಕೆ.ಬಿ.ರಾಜು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಚಾಲನೆ ನೀಡಲಾಯಿತು. ಕೆ.ಬಿ.ರಾಜು ದಿನದ ಮಹತ್ವ ಬಗ್ಗೆ ಮಾಹಿತಿ ನೀಡಿದರು.

ಪರಿಶಿಷ್ಟ ಜಾತಿ, ಪಂಗಡದ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಪ್ಪ, ದಲಿತ ಹಿತರಕ್ಷಣಾ ಸಮಿತಿ ಜಿಲ್ಲಾ ಸಂಚಾಲಕ ಬಿ.ಡಿ.ಅಣ್ಣಯ್ಯ, ಸೋಮವಾರಪೇಟೆ ತಾಲೂಕು ಬಿಎಸ್‍ಪಿ ಅಧ್ಯಕ್ಷ ಜಯಪ್ಪ ಹಾನಗಲ್, ಕುಶಾಲನಗರ ಎಸ್‍ಡಿಪಿಐ ಪ್ರಮುಖ ಆಬಿದ್, ಡಿಎಸ್‍ಎಸ್ ಪ್ರಮುಖ ಕೀರ್ತಿರಾಜು, ನಿವೃತ್ತ ಪ್ರಾಂಶುಪಾಲ ಹೆಚ್.ಕೆ. ಕೇಶವಯ್ಯ ಮತ್ತಿತರರು ಇದ್ದರು.