ಮಡಿಕೇರಿ, ಜ. 6: ಸೋಮವಾರಪೇಟೆ ತಾಲೂಕಿನ ನೇಗಳ್ಳೆ ಕರ್ಕಳ್ಳಿ ಗ್ರಾಮದ ಶ್ರೀ ವೀರಭದ್ರೇಶ್ವರ ಯುವಕ ಸಂಘ, ಜಿಲ್ಲಾ ಯುವ ಒಕ್ಕೂಟ, ಮೂರು ತಾಲೂಕು ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾಮಟ್ಟದ ಯುವಜನ ಮೇಳ ತಾ. 21 ರಂದು ನಡೆಯಲಿದೆ.
ಇತ್ತೀಚೆಗೆ ನಡೆದ ಸೋಮವಾರಪೇಟೆ ತಾಲೂಕು ಯುವ ಒಕ್ಕೂಟದ ಪೂರ್ವಭಾವಿ ಸಭೆಯಲ್ಲಿ ಯುವಜನ ಮೇಳವನ್ನು ನಡೆಸುವ ಕುರಿತು ನಿರ್ಧರಿಸಲಾಯಿತು. ನೇಗಳ್ಳೆ ಕರ್ಕಳ್ಳಿ ಗ್ರಾಮದ ಶಾಲಾ ಮೈದಾನದಲ್ಲಿ ತಾ. 21 ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವದೆಂದು ಶ್ರೀ ವೀರಭದ್ರೇಶ್ವರ ಯುವಕ ಸಂಘದ ಅಧ್ಯಕ್ಷ ಎನ್.ಎಂ. ದಿವಾಕರ್ ತಿಳಿಸಿದ್ದಾರೆ.
ಎಲ್ಲಾ ಯುವಕ-ಯುವತಿ ಮಂಡಳಿಗಳು ಪೂರ್ವ ತಯಾರಿಯೊಂದಿಗೆ ಯುವಜನ ಮೇಳದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 94817 72110 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.