ಮಡಿಕೇರಿ, ಜ. 6: ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಫೆಬ್ರವರಿ ತಿಂಗಳಲ್ಲಿ ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ತಾ. 10 ರಂದು ಬೆಳಿಗ್ಗೆ 2.30ಕ್ಕೆ ಟಿ. ಶೆಟ್ಟಿಗೇರಿ ಕೊಡವ ಸಮಾಜ ಸಭಾಂಗಣದಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಸಭೆಯಲ್ಲಿ ಕ.ಸಾ.ಪ. ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ಸಾಗರ್ ಉಪಸ್ಥಿತರಿರುವರು. ಸಭೆಯಲ್ಲಿ 8 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಪಟ್ಟಂತೆ ಸ್ವಾಗತ ಸಮಿತಿ ಹಾಗೂ ವಿವಿಧ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಎಲ್ಲಾ ಕನ್ನಡ ಸಾಹಿತ್ಯ ಆಸಕ್ತರು, ಸಂಘ-ಸಂಸ್ಥೆಗಳ ಅಧ್ಯಕ್ಷರು, ಪ್ರತಿನಿಧಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರುಗಳು ಸಭೆಗೆ ಆಗಮಿಸುವಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ.