ಮಡಿಕೇರಿ, ಜ. 5 : ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಸಮಾನ ಮನಸ್ಕರ ವೇದಿಕೆ ತಾ.6 ರಂದು (ಇಂದು) ನಡೆಸುತ್ತಿರುವ ಪ್ರತಿಭಟನಾ ಸಮಾವೇಶಕ್ಕೆ ಚೆರಿಯಪರಂಬು ಮತ್ತು ಕಲ್ಲುಮೊಟ್ಟೆ ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಂಬಲ ಸೂಚಿಸಿದೆ.