ಸೋಮವಾರಪೇಟೆ, ಜ. 6: ಎಸ್‍ಜೆಎಂ ಬಾಲಿಕಾ ಪ್ರೌಢಶಾಲೆಯ ವಾರ್ಷಿಕೋತ್ಸವ ಶಾಲಾ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಉದ್ಘಾಟಿಸಿದರು. ಶಾಲೆ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಎಲ್ಲಾ ವರ್ಗದ ಜನರಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವದು ಶಾಲೆಯ ಹೆಗ್ಗಳಿಕೆಯಾಗಿದೆ. ವಿದ್ಯಾರ್ಥಿಗಳು ಇಂತಹ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಣ ಪಡೆದು ಸಾಧನೆಗೈಯಬೇಕಿದೆ. ವಿದ್ಯಾರ್ಥಿಗಳು ಶಿಕ್ಷಣದ ಅವಧಿಯಲ್ಲಿ ದುಶ್ಚಟಗಳಿಂದ ದೂರ ಇರಬೇಕು ಎಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ಮುಖ್ಯ ಶಿಕ್ಷಕ ಹೆಚ್.ಎಂ ರುದ್ರೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಜಿ. ಸುರೇಶ್, ಎಸ್‍ಡಿಎಂಸಿ ಅಧ್ಯಕ್ಷ ಕೆ.ಎ. ಅಬ್ದುಲ್ ಖಾದರ್, ಉಪಾಧ್ಯಕ್ಷೆ ಹೇಮಾವತಿ, ಪ.ಪಂ. ಮಾಜಿ ಅಧ್ಯಕ್ಷೆ ನಳಿನಿ ಗಣೇಶ್, ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಇದ್ದರು. ದಾನಿಗಳಾದ ಬಿ.ಪಿ. ವಸಂತ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಸಹ ಶಿಕ್ಷಕರಾದ ಎಂ.ಟಿ. ಪರಮೇಶ್ವರಪ್ಪ, ಅಂಬುಜಾಕ್ಷಿ, ರಾಣಿ ರವೀಂದ್ರ, ಎಸ್.ಕೆ. ರಾಣಿ ಕಾರ್ಯಕ್ರಮ ನಿರ್ವಹಿಸಿದರು.