ಮಡಿಕೇರಿ, ಜ. 5: ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2018ರ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಭಾರತ ಚುನಾವಣಾ ಆಯೋಗ ತಾ. 12 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.

ತಾ. 1 ರಿಂದ 12 ರವರೆಗೆ ವಿಶೇಷ ಆಂದೋಲನ ಕಾರ್ಯಕ್ರಮವನ್ನು ನಡೆಸಲು ಸೂಚಿಸಿದ್ದು, ಅದರಂತೆ ಜನವರಿ 1 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟಿಗೆ ಸೇರಿಸಬಹುದು.

ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರು ತೆಗೆಯಲು, ಮತದಾರರ ಗುರುತಿನ ಚೀಟಿಯಲ್ಲಿ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಬಹುದು.

ಒಂದು ವಿಧಾನ ಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ವಿಶೇಷ ಆಂದೋಲನ ಅವಧಿಯಲ್ಲಿ ಅಂದರೆ ಜನವರಿ 12 ರವರೆಗೆ ನಿಮ್ಮ ಗ್ರಾಮದ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ತಾಲೂಕು ಕಚೇರಿಗಳಿಗೆ ನಿಗದಿತ ನಮೂನೆಗಳಲ್ಲಿ (ನಮೂನೆ-6 ಸೇರ್ಪಡೆ, ನಮೂನೆ-7 ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು, ನಮೂನೆ-8 ತಿದ್ದುಪಡಿಗಾಗಿ ಮತ್ತು ನಮೂನೆ-8ಎ ಒಂದು ವಿಧಾನ ಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ) ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

* ವಿಶ್ವದ್ಯಾನಿಲಯದಿಂದ ಅರ್ಜಿ ಆಹ್ವಾನ

2017ನೇ ಸಾಲಿನ ವಿವಿಧ ಸ್ನಾತಕ್ಕೋತ್ತರ ವಿಷಯಗಳಲ್ಲಿ ಪಿ.ಎಚ್‍ಡಿ ಅಧ್ಯಾಯನಕ್ಕೆ ಮಂಗಳೂರು ವಿಶ್ವದ್ಯಾನಿಲಯದಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ನಮೂನೆಗಳನ್ನು ಮಂಗಳೂರು ವಿಶ್ವವಿದ್ಯಾನಿಲಯ ರಿಜಿಸ್ಟ್ರರ್ ಕಚೇರಿಯಲ್ಲಿ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಮತ್ತು ಯೂನಿವರ್‍ಸಿಟಿ ಕಾಲೇಜು ಹಂಪನಕಟ್ಟೆ ಮಂಗಳೂರು ಇಲ್ಲಿ ಪಡೆಯಬಹುದಾಗಿದೆ. ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 1050 ಪರಿಶಿಷ್ಟ ಜಾತಿ -ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 525 ಅರ್ಜಿ ಶುಲ್ಕವಿದ್ದು ಅರ್ಜಿ ಸಲ್ಲಿಸಲು ತಾ. 31 ಕಡೆಯ ದಿನವಾಗಿದ್ದು, ಅರ್ಜಿಗಳನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗೆ ತಿತಿತಿ.mಚಿಟಿgಚಿಟoಡಿeuಟಿiveಡಿsiಣಥಿ.ಚಿಛಿ.iಟಿ ವೆಬ್‍ಸೈಟ್‍ನಲ್ಲಿ ಮಾಹಿತಿ ಪಡೆಯಬಹುದಾಗಿದೆ.

* ಭದ್ರತಾಪಡೆ ಆಯ್ಕೆಗೆ ಪೂರ್ವ ಸಿದ್ಧತೆ

ಭಾರತೀಯ ಕರಾವಳಿ ಭದ್ರತಾಪಡೆಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಪುರುಷ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2017-18ನೇ ಸಾಲಿಗೆ ನೀಡುತ್ತಿದೆ.

ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. 10, ಸಂಜೆ 5.30 ಕೊನಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಲ್ಲಾ ಅಧಿಕಾರಿ ಕೆ.ವಿ. ಸುರೇಶ್ ತಿಳಿಸಿದ್ದಾರೆ.

* ಪರೀಕ್ಷೆ; ಅವಧಿ ವಿಸ್ತರಣೆ

2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತರಬೇತಿಗಾಗಿ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿಲ್ಲ. ಬದಲಾಗಿ ಅಭ್ಯರ್ಥಿಗಳು ತಾವು ಪದವಿಯಲ್ಲಿ ಗಳಿಸಿರುವ ಅಂಕಗಳು ಪ್ರವರ್ಗವಾರು ಮೀಸಲಾತಿಯನ್ವಯ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ತಾವು ಪದವಿಯಲ್ಲಿ ಗಳಿಸಿರುವ ಅಂಕಗಳ ಮಾಹಿತಿಯನ್ನು ಆನ್ ಲೈನ್ ಮೂಲಕ ನಮೂದಿಸಬೇಕಾಗಿರುತ್ತದೆ. ಆದರೆ ಸದರಿ ಅಂಕಗಳ ದಶಾಂಶವನ್ನು ನಮೂದಿಸಲು ತಾ. 8 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses. ಞಚಿಡಿ.ಟಿiಛಿ.iಟಿ ನಲ್ಲಿ ಸಂಪರ್ಕಿಸಬಹುದು

* ಆಯ್ಕೆ ಪಟ್ಟಿ ಪ್ರಕಟಿಸುವ ಬಗ್ಗೆ

ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ತಾಲೂಕು ವ್ಯಾಪ್ತಿಗೆ ಒಳಪಟ್ಟಂತೆ 5 ಅಂಗನವಡಿ ಕಾರ್ಯಕರ್ತೆ ಹುದ್ದೆ ಮತ್ತು 17 ಸಹಾಯಕಿ ಹುದ್ದೆಗೆ ಜನವರಿ 3 ರಂದು ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಆಕ್ಷೇಪಣೆ ಏನಾದರೂ ಇದ್ದಲ್ಲಿ ತಾ. 11 ರೊಳಗೆ ಕಚೇರಿ ಸಮಯದಲ್ಲಿ ಸಲ್ಲಿಸತಕ್ಕದ್ದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

* ಗಮಕ ವಾಚನ ಮತ್ತು ವ್ಯಾಖ್ಯಾನ ತರಬೇತಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ತಾ. 20 ರಿಂದ 22 ರವರೆಗೆ 3 ದಿನಗಳ ಗಮಕ ವಾಚನ ಮತ್ತು ವ್ಯಾಖ್ಯಾನ ತರಬೇತಿ ಶಿಬಿರವನ್ನು ಸದಸ್ಯೆ ನಿರ್ಮಲಾ ಪ್ರಸನ್ನ ಅವರ ಸಂಚಾಲಕತ್ವದಲ್ಲಿ ಸಂಸ್ಕøತಿ ಭವನ, ಸಂಸ್ಕøತಂ ಮಾರ್ಗ, ಉತ್ತರ ಬಡಾವಣೆ, ಹಾಸನದಲ್ಲಿ ಏರ್ಪಡಿಸಿದೆ. ಶಿಬಿರದಲ್ಲಿ ಭಾಗವಹಿಸಲು ಇಚ್ಚಿಸುವವರು ಈ ಕೆಳಕಂಡ ನಿಬಂಧನೆಗಳಿಗೆ ಒಳಪಟ್ಟಿರಬೇಕು.

ಕರ್ನಾಟಕ ಗಮಕ ಕಲಾ ಪರಿಷತ್ತು ನಡೆಸುವ ಗಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರಬೇಕು. ಸಂಗೀತದಲ್ಲಿ ಕನಿಷ್ಟ ಜೂನಿಯರ್ ಪರೀಕ್ಷೆಗೆ ಸರಿಸಮನಾದ ಜ್ಞಾನವಿರಬೇಕು. ವಯೋಮಿತಿ ಕಡ್ಡಾಯ ಇರುವದಿಲ್ಲ. ಸಂಗೀತದ ಗುರುಗಳೂ ಭಾಗವಹಿಸಬಹುದು.

ಆಸಕ್ತ ಅಭ್ಯರ್ಥಿಗಳು ಸ್ವವಿವರಗಳೊಂದಿಗೆ ಅರ್ಜಿಯನ್ನು (ಹೆಸರು, ವಿಳಾಸ, ದೂರವಾಣಿ, ಮೊಬೈಲ್, ಸಂಗೀತದಲ್ಲಿ ಅಭ್ಯಾಸ ಮಾಡಿರುವ ಬಗ್ಗೆ ದೃಢೀಕರಣ ಪತ್ರ ಹಾಗೂ ಗಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರುವ ಬಗ್ಗೆ ಪ್ರಮಾಣ ಪತ್ರದೊಂದಿಗೆ, ತಾ. 12 ರೊಳಗಾಗಿ, ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-2 ಇಲ್ಲಿಗೆ ಕಳುಹಿಸಿಕೊಡಬೇಕು. ಆದ್ಯತೆ ಮೇರೆಗೆ ಶಿಬಿರಾರ್ಥಿಗಳನ್ನು ಆಯ್ಕೆ ಮಾಡಲಾಗುವದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 080- 22215072 ಮೂಲಕ ಅಥವಾ ಮೊ. 9731428121 ಮೂಲಕ ಸಂಪರ್ಕಿಸಬಹುದು.

* ಸಂಭವನೀಯ ಪಟ್ಟಿ ಪ್ರಕಟ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪೊನ್ನಂಪೇಟೆ-ವೀರಾಜಪೇಟೆ ತಾಲೂಕಿನಲ್ಲಿ ಡಿಸೆಂಬರ್ 28 ರಂದು ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರುಗಳ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ಅರ್ಜಿಗಳನ್ನು ತಾ. 3 ರಂದು ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿರ ಆಯ್ಕೆ ಸಮಿತಿ ಹಾಗೂ ಜಿಲ್ಲಾಧಿಕಾರಿಗಳು ಕೊಡಗು ಜಿಲ್ಲೆ ಮಡಿಕೇರಿ ಇವರ ಅಧ್ಯಕ್ಷತೆಯಲ್ಲಿ ಗುರುತಿಸಲಾದ ಅಂಗನವಾಡಿ ಕಾರ್ಯಕರ್ತೆ ಸಹಾಕಿಯರ ಸಂಭವನೀಯ ಪಟ್ಟಿಯನ್ನು ಪೊನ್ನಂಪೇಟೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ತಾ. 10 ರೊಳಗೆ ಸೂಕ್ತ ದಾಖಲಾತಿಗಳೊಂದಿಗೆ ಮನವಿಯನ್ನು ಖುದ್ದಾಗಿ ಪೊನ್ನಂಪೇಟೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಸಲ್ಲಿಸುವದು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವದಿಲ್ಲ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.