ಸೋಮವಾರಪೇಟೆ, ಜ. 5: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಜಿಗಿದು ಆತ್ನಹತ್ಯೆಗೆ ಶರಣಾಗಿರುವ ಘಟನೆ ಸಮೀಪದ ತಲ್ತಾರೆಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ತಲ್ತಾರೆಶೆಟ್ಟಳ್ಳಿ ಗ್ರಾಮ ನಿವಾಸಿ ಬಿ.ಎನ್. ತಿಮ್ಮಯ್ಯ ಎಂಬವರ ತಾಯಿ ಗಂಗಮ್ಮ (65) ಅವರು ಕಳೆದ ಕೆಲ ಸಮಯಗಳಿಂದ ಮೂರ್ಚೆರೋಗದಿಂದ ಬಳಲುತ್ತಿದ್ದು, ಈ ವಿಚಾರವಾಗಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.