ಮಡಿಕೇರಿ, ಜ. 6: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ 5ನೇ ತರಗತಿಗೆ ಬಾಲಕ-ಬಾಲಕಿಯರ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡಾಪಟುಗಳ ಆಯ್ಕೆ ತಾ. 16 ರಂದು ಕೂಡಿಗೆ ಸರ್ಕಾರಿ ಕ್ರೀಡಾ ಪ್ರೌಢಶಾಲಾ ಕ್ರೀಡಾಂಗಣ, ತಾ. 17 ರಂದು ವೀರಾಜಪೇಟೆ ತಾಲೂಕಿನ ಪೊನ್ನಂಪೇಟೆ ತಾಲೂಕು ಮಿನಿ ಕ್ರೀಡಾಂಗಣ ಹಾಗೂ ತಾ. 18 ರಂದು ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.