ಸೋಮವಾರಪೇಟೆ, ಜ. 5: ತಾಲೂಕಿನ ಹರದೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಪಿ. ಸುಮಾ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯನ್ನು ತಾಲೂಕು ತಹಶೀಲ್ದಾರ್ ನಿರ್ವಹಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರುಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.