ಸುಂಟಿಕೊಪ್ಪ, ಜ. 5: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸುಂಟಿಕೊಪ್ಪ ಪೊಲೀಸ್ ಠಾಣೆ ವತಿಯಿಂದ ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ನಡೆಯಿತು.
ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ, ಪ್ರತಿಯೊಬ್ಬರೂ ಸಮಾಜದಲ್ಲಿ ಅಪರಾಧ ತಡೆಯುವ ನಿಟ್ಟಿನಲ್ಲಿ ಮುತುವರ್ಜಿ ವಹಿಸಬೇಕು ಎಂದರು.
ಪೊಲೀಸ್ ಠಾಣೆಯ ಎಎಸ್ಐ ಗುಣಶೇಖರ್ ಮಾತನಾಡಿ, ಅಪರಾಧ ತಡೆಯಲು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು.
ಶಿಕ್ಷಕರಾದ ಎಂ.ಎನ್. ಲತಾ, ಟಿ.ಜಿ. ಪ್ರೇಮ್ಕುಮಾರ್, ಸಿ.ಟಿ. ಸೋಮಶೇಖರ್, ಎಸ್.ಟಿ. ವೆಂಕಟೇಶ್, ಪೊಲೀಸ್ ಸಿಬ್ಬಂದಿಗಳಾದ ಎಸ್.ಟಿ. ಧನಂಜಯ, ಹೆಚ್.ವಿ. ಶಿಲ್ಪ, ಕೆ.ಪಿ. ಹರೀಶ್ ಇತರರು ಇದ್ದರು.