ಸಿದ್ದಾಪುರ, ಜ. 6: ಸಿದ್ದಾಪುರ ಠಾಣಾ ವ್ಯಾಪ್ತಿಯ ಹಚ್ಚಿನಾಡು ಗ್ರಾಮದ ನಿವಾಸಿ ಜರೀನ ಬೇಗಂ (23) ಎಂಬಾಕೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಬಗ್ಗೆ ಹಾಗೂ ತ್ಯಾಗತ್ತೂರು ಗ್ರಾಮದ ಸುಬೈಧ (53) ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈರ್ವರು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.