ಸೋಮವಾರಪೇಟೆ, ಜ. 6: ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಉನ್ನತಿಗಾಗಿ ತಾ.7ರಂದು (ಇಂದು) ಪಿರಿಯಾಪಟ್ಟಣದ ಮಸಣಿಕಮ್ಮ ಹಾಗೂ ಕನ್ನಂಬಾಡಿ ಅಮ್ಮನವರ ದೇವಸ್ಥಾನಕ್ಕೆ ಕಾಲ್ನಡಿಗೆ ಜಾಥದೊಂದಿಗೆ ತೆರಳಿ ಪೂಜೆ ಸಲ್ಲಿಸಲಾಗುವದು ಎಂದು ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್ ತಿಳಿಸಿದ್ದಾರೆ.