ಗೋಣಿಕೊಪ್ಪ ವರದಿ, ಜ. 5: ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನೀಡುವ ಶೇ. 100 ರಷ್ಟು ಫಲಿತಾಂಶ ಪಡೆದ ಕಾಲೇಜು ಗಳಿಗೆ ನೀಡುವ ವಿಶೇಷ ಪ್ರಶಸ್ತಿ ಯನ್ನು ಪೊನ್ನಂಪೇಟೆಯ ಸಂತ ಅಂತೋಣಿ ಪದವಿಪೂರ್ವ ಕಾಲೇಜು ಪಡೆದುಕೊಂಡಿದೆ.
ಬೆಂಗಳೂರು ದಯಾನಂದ ಸಾಗರ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿಯಲ್ಲಿ 2016-17 ಸಾಲಿನಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆದ ಸಾಧನೆಗಾಗಿ ಪ್ರಶಸ್ತಿ ನೀಡಲಾಯಿತು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಪ್ರಶಸ್ತಿ ವಿತರಿಸಿದರು. ಸಂತ ಅಂತೋಣಿ ಪಿ.ಯು. ಕಾಲೇಜು ಪ್ರಾಂಶುಪಾಲೆ ಚಂದ್ರಿಕಾ ಮಂಜುನಾಥ್ ಪ್ರಶಸ್ತಿ ಮತ್ತು ಸ್ಮರಣಿಕೆ ಸ್ವೀಕರಿಸಿದರು.
ಈ ಸಂದರ್ಭ ಕಾಲೇಜಿನ ಸಂಚಾಲಕ ರೆವರೆಂಡ್ ಫಾದರ್ ಜೇಕಬ್ ಕೊಲ್ಲಮಾರ್ ಉಪಸ್ಥಿತರಿದ್ದರು.