ಮಡಿಕೇರಿ, ಜ. 6: ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹುದಿಕೇರಿಯ ಜನತಾ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಮೊಣ್ಣಂಡ ಕೆ. ಚಂಗಪ್ಪ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮ ತಾ. 8 ರಂದು ಹುದಿಕೇರಿಯ ಜನತಾ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಾಜಪೇಟೆ ತಾಲೂಕು ಕ.ಸಾ.ಪ. ಅಧ್ಯಕ್ಷ ಮಲ್ಲೇಂಗಡ ಮಧೋಶ್ ಪೂವಯ್ಯ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹುದಿಕೇರಿ ಜನತಾ ಪ್ರೌಢಶಾಲೆ ಅಧ್ಯಕ್ಷ ಚಂಗುಲಂಡ ಸೂರಜ್, ಜನತಾ ಪ್ರೌಢಶಾಲೆಯ ಮುಖ್ಯ ಉಪಾಧ್ಯಾಯಿನಿ ಸಿ.ಕೆ. ಮೋಹನ ಕುಮಾರಿ, ಮಹಾಲಕ್ಷ್ಮಿ ಮೋಟಾರ್ಸ್ ಮಾಲೀಕ ಮಚ್ಚಮಾಡ ಸತೀಶ್ ಅಯ್ಯಣ್ಣ ಪಾಲ್ಗೊಳ್ಳಲಿದ್ದಾರೆ. ‘ಕೊಡವ-ಕನ್ನಡ ಭಾಷಾ ಭಾಂದವ್ಯ‘ ವಿಷಯದ ಕುರಿತು ಕೊಡಗು ಪತ್ರಕರ್ತರ ವೇದಿಕೆ ಅಧ್ಯಕ್ಷ ಶ್ರೀಧರ್ ನೆಲ್ಲಿತ್ತಾಯ ಉಪನ್ಯಾಸ ನೀಡಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಶ್ರೀಮಂಗಲ ಹೋಬಳಿ ಕ.ಸಾ.ಪ. ಅಧ್ಯಕ್ಷ ಚಟ್ಟಂಗಡ ರವಿ ಸುಬ್ಬಯ್ಯ, ಜಿಲ್ಲಾ ಕ.ಸಾ.ಪ. ನಿರ್ದೇಶಕ ಬಾಲಕೃಷ್ಣ ರೈ, ವೀರಾಜಪೇಟೆ ತಾಲೂಕು ಕ.ಸಾ.ಪ. ಗೌರವ ಕಾರ್ಯದರ್ಶಿ ಚಮ್ಮಟ್ಟೀರ ಪ್ರವೀಣ್ ಉತ್ತಪ್ಪ ಉಪಸ್ಥಿತರಿರುವರು.