ಮಡಿಕೇರಿ, ಜ. 5: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯಾದ್ಯಂತ ನಡೆದಿರುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಲ್ಲಿ ಪಿ.ಎಫ್.ಐ. ಮತ್ತು ಎಸ್.ಡಿ.ಪಿ.ಐ. ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟಿಸಲಾಯಿತು.
ಕೇರಳದಲ್ಲಿ ಕಮ್ಯುನಿಸ್ಟ್‍ಮತೀಯ ಶಕ್ತಿಗಳು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ನಿರಂತರವಾಗಿ ಹತ್ಯೆಗೈಯುವ ಪ್ರವೃತ್ತಿಯನ್ನು ಹಲವು ದಶಕಗಳಿಂದ ಮಾಡುತ್ತಿದ್ದು, ಅದೇ ಮಾದರಿಯ ಹತ್ಯೆಗಳು ಕರ್ನಾಟಕ ರಾಜ್ಯದಲ್ಲೂ ಆರಂಭವಾಗಿದೆ. ಈ ಹತ್ಯೆಯ ಹಿಂದೆ ಮತೀಯ ಶಕ್ತಿಗಳಾದ ಪಿ.ಎಫ್.ಐ. ಮತ್ತು ಎಸ್.ಡಿ.ಪಿ.ಐ. ಕಾರ್ಯಕರ್ತರು ನೇರವಾಗಿ ಭಾಗಿ ಯಾಗಿದ್ದಾರೆ. ಇದಕ್ಕೆ ಪರೋಕ್ಷವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಸಂದರ್ಭ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿ ಕುಶಾಲಪ್ಪ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರದ ತುಷ್ಟೀಕರಣ ನೀತಿಯಿಂದಾಗಿ ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಪ್ರಾಮಾಣಿಕ ಅಧಿಕಾರಿಗಳು ರಾಜ್ಯದಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ಅಸಾಧ್ಯವಾಗಿದೆ ಎಂದು ಆರೋಪಿಸಿದರು.
ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಹ ಕಾರ್ಯದರ್ಶಿ ಅಜಿತ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ 24 ಮಂದಿ ಹಿಂದೂ ಸಂಘಟನೆಗಳ ಕಾರ್ಯ ಕರ್ತರು ಹತ್ಯೆಯಾಗಿದ್ದಾರೆ. ಹತ್ಯೆ ಆರೋಪಿಗಳು ಪಿ.ಎಫ್.ಐ. ಹಾಗೂ ಎಸ್.ಡಿ.ಪಿ.ಐ. ಸಂಘಟನೆ ಗಳ ಕಾರ್ಯಕರ್ತರಾಗಿದ್ದಾರೆ ಎಂದು ಆರೋಪಿಸಿದ ಅವರು, ಈ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿದರು.
ಪೊಲೀಸರ ವಿರುದ್ಧ ಆಕ್ರೋಶ
ಪ್ರತಿಭಟನಾಕಾರರು ರಸ್ತೆತಡೆ ಮಾಡುತ್ತಿದ್ದಾಗ ಹೆಚ್ಚು ಸಮಯ ತೆಗೆದುಕೊಳ್ಳದಂತೆ ಪೊಲೀಸರು ವಾಹನಗಳನ್ನು ಬಿಡಲು ಮುಂದಾದಾಗ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರಸ್ತೆ ತಡೆ ಮುಂದುವರೆಯಿತು.
(ಮೊದಲ ಪುಟದಿಂದ) ಈ ಸಂದರ್ಭ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ ಆಕ್ರೋೀಶ ಭರಿತರಾಗಿ ಮಾತನಾಡಿ, ರಾಜ್ಯದಲ್ಲಿ 24 ಮಂದಿ ಕಾರ್ಯ ಕರ್ತರನ್ನು ಕಳೆದುಕೊಂಡಿ ದ್ದೇವೆ. ಕಾರ್ಯಕರ್ತರ ಜೀವಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದರು. ಕಾಟಿಪಳ್ಳದಲ್ಲಿ ದೀಪಕ್ ರಾವ್ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿ ಗಳಾದ ಶಾಂತರಾಮ್ ನೇತೃತ್ವದ ತಂಡವನ್ನು ಇದೇ ಸಂದರ್ಭ ಶ್ಲಾಘಿಸಿದರು. ಬಳಿಕ ಜಿಲ್ಲಾಡಾಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಹಿಂದೂ ಸಂಘಟನೆಗಳ ಪ್ರಮುಖರಾದ ಬಿ.ಬಿ. ಮಹೇಶ್, ಬಿ.ಎ. ಗಣೇಶ್, ಕುಮಾರ್, ನಂದೀಶ್, ಬಿ.ಕೆ. ಜಗದೀಶ್, ಬಿ.ಕೆ. ಅರುಣ್ ಕುಮಾರ್, ಸುಕುಮಾರ್, ರಮೇಶ್ ಹೊಳ್ಳ, ಪ್ರಸನ್ನ ಭಟ್, ನಗರಸಭಾ ಸದಸ್ಯರಾದ ಉಣ್ಣಿಕೃಷ್ಣ, ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್. ರಮೇಶ್ ಇನ್ನಿತರರು ಇದ್ದರು. ವೃತ್ತ ನಿರೀಕ್ಷಕ ಪ್ರದೀಪ್ ಕುಮಾರ್, ಎಸ್.ಐ. ಷಣ್ಮುಗ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
* ವೀರಾಜಪೇಟೆ : ಸೂರತ್ಕಲ್ ಕಾಟಿಪಾಳ್ಯದ ನಿವಾಸಿ ದೀಪಕ್ ರಾವ್ ಹತ್ಯೆಯನ್ನು ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳು ಹಾಗೂ ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಗಡಿಯಾರ ಕಂಭದ ಬಳಿ ಹಿಂದೂ ಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮತ್ತು ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕರರನ್ನು ಉದ್ದೇಶಿಸಿ ಮಾತನಾಡಿ, ತಾಲೂಕು ಭಾ.ಜ.ಪ. ಅಧ್ಯಕ್ಷ ಅರುಣ್ ಭೀಮಯ್ಯ ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತಾಲೂಕು ಸಂಘ ಚಾಲಕ ಪ್ರಿನ್ಸ್ ಗಣಪತಿ ಕೊಲೆಯ ತಿನಿಖೆಯನ್ನು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ಮಾಡಿಸಿ ರಾಜ್ಯದಲ್ಲಿ ಹಿಂದೂ ಧರ್ಮದವರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆ ವೇಳೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಮುಖಂಡ ಟಾಟಾ ಬೋಪಯ್ಯ, ವಿಶ್ವ ಹಿಂದೂ ಪರಿಷತ್ ತಾಲೂಕು ಕಾರ್ಯಧ್ಯಕ್ಷ ಉದ್ದಪಂಡ ಜಗತ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮೀತ ಪ್ರಕಾಶ್, ಸ್ಥಾಯಿ ಸಮಿತಿಯ ಅಧ್ಯಕ್ಷ ಬಿ.ಎಂ. ಗಣೇಶ್, ಸದಸ್ಯ ಅಜಿತ್ ಕರುಂಬಯ್ಯ, ತಾಲೂಕು ಭಾ.ಜ.ಪ. ಅಧ್ಯಕ್ಷ ಅರುಣ್ ಭೀಮಯ್ಯ, ನಗರ ಅಧ್ಯಕ್ಷ ಅನಿಲ್, ಕಾರ್ಯದರ್ಶಿ ದಿವಾಕರ್ ಶೆಟ್ಟಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕೂತಂಡ ಸಚೀನ್ ಮತ್ತು ಸಂಘ ಪರಿವಾರದ ಸದಸ್ಯರು ಹಾಗೂ ಪಕ್ಷದ ಮುಖಂಡರು ಹಾಜರಿದ್ದರು. ಮೃತ ದೀಪಕ್ ರಾವ್ ಅವರ ಅತ್ಮಕ್ಕೆ ಶಾಂತಿ ಕೋರಿ ಲಭಿಸುವಂತೆ ಒಂದು ನಿಮಿಷ ಮೌನಾಚರಣೆ ಮಾಡಿ ಮಾನವ ಸರಪಳಿ ರಚಿಸಲಾಯಿತು.