ಮಡಿಕೇರಿ, ಜ. 6: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಪುಸ್ತಕ ನೀಡುವ ಕಾರ್ಯಕ್ರಮದ ಅಡಿಯಲ್ಲಿ ವೀರಾಜಪೇಟೆ ಕಾವೇರಿ ಕಾಲೇಜಿಗೆ ಪುಸ್ತಕ ವಿತರಣಾ ಸಮಾರಂಭ ತಾ. 10 ರಂದು ವೀರಾಜಪೇಟೆ ಕಾವೇರಿ ಕಾಲೇಜಿನ ಕೌಸ್ತುಭ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ವಹಿಸಲಿದ್ದು, ಉದ್ಘಾಟನೆಯನ್ನು ಕಾವೇರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ. ಅಜ್ನಿಕಂಡ ಗಣಪತಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಈ.ಸಿ. ಜೀವನ್, ಕಾವೇರಿ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಕುಟ್ಟಂಡ ಉತ್ತಪ್ಪ, ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲ ಸಿ.ಎಂ. ನಾಚಪ್ಪ ಹಾಗೂ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ವೀರಾಜಪೇಟೆ ಕ.ಸಾ.ಪ. ತಾಲೂಕು ಅಧ್ಯಕ್ಷ ಮಲ್ಲೇಂಗಡ ಮಧೋಶ್ ಪೂವಯ್ಯ ಪಾಲ್ಗೊಳ್ಳಲಿದ್ದಾರೆ.