ಸೋಮವಾರಪೇಟೆ, ಜ. 6: ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಭೆ ತಾ. 12 ರಂದು ಪೂರ್ವಾಹ್ನ 11 ಗಂಟೆಗೆ ಗ್ರಾ.ಪಂ. ಆವರಣದಲ್ಲಿ ಅಧ್ಯಕ್ಷೆ ರೇಣುಕಾ ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಭೆಗೆ ಜಿ.ಪಂ. ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಸದಸ್ಯೆ ತಂಗಮ್ಮ, ನೋಡಲ್ ಅಧಿಕಾರಿಯಾಗಿ ಕೃಷಿ ಇಲಾಖೆಯ ಕವಿತ ಸೇರಿದಂತೆ ಇತರ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅಭಿವೃದ್ಧಿ ಅಧಿಕಾರಿ ರವೀಶ್ ತಿಳಿಸಿದ್ದಾರೆ.