ಮಡಿಕೇರಿ, ಜ. 7: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಅವರು ತಾ. 8 ಮತ್ತು 9 ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಸಚಿವರು ತಾ. 8 ರಂದು (ಇಂದು) ಮಧ್ಯಾಹ್ನ 12 ಗಂಟೆಗೆ ನಗರಕ್ಕೆ ಆಗಮಿಸಲಿದ್ದಾರೆ. ಬಳಿ 12.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಬಳಿಕ ತಾ. 9 ರಂದು (ನಾಳೆ) ಬೆಳಗ್ಗೆ 11.15 ಗಂಟೆಗೆ ನಗರದ ಹೊರ ವಲಯದ ಗಾಲ್ಫ್ ಮೈದಾನದ ಹೆಲಿಪ್ಯಾಡ್‍ನಲ್ಲಿ ಮುಖ್ಯಮಂತ್ರಿಯವರನ್ನು ಬರಮಾಡಿಕೊಳ್ಳಲಿದ್ದಾರೆ.

ನಂತರ 12 ಗಂಟೆಗೆ ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ನಡೆಯುವ ಕೊಡಗು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಚಾಲನೆ ಮತ್ತು ವಿವಿಧ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.