ಮಡಿಕೇರಿ, ಜ. 7: ಆಧುನಿಕ ಯುಗದಲ್ಲಿ ಯುವಜನರು ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವ ಈ ಸಂದರ್ಭ ಮಾದಕ ವಸ್ತುಗಳ ಬಳಕೆಯಿಂದಾಗುವ ಪರಿಣಾಮ ಕುರಿತು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾವೇರಿ ಕಾಲೇಜು ಗೋಣಿಕೊಪ್ಪದ ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆಯಿಂದಾಗುವ ಪರಿಣಾಮದ ಬಗ್ಗೆ ಗುಂಪು ಚಟುವಟಿಕೆ ನೀಡಿ ವಿಷಯ ಮಂಡನೆಗೆ ಅವಕಾಶ ನೀಡಲಾಯಿತು. ವಿದ್ಯಾರ್ಥಿಗಳು ನೀಡಿದ ಮಾಹಿತಿಯನ್ನು ಇತರ ವಿದ್ಯಾರ್ಥಿಗಳಿಗೆ ತಿಳಿಸಿ ಮಾದಕ ವ್ಯಸನದ ಪರಿಣಾಮವನ್ನು ತಾವೇ ಅರಿತುಕೊಳ್ಳುವಂತೆ ಮಾಡಲಾಯಿತು.