ಕುಶಾಲನಗರ, ಜ. 7: ಕುಶಾಲನಗರದ ಕೊಡವ ಸಮಾಜದ ಆಶ್ರಯದಲ್ಲಿ ಪುತ್ತರಿ ಊರೋರ್ಮೆ ಕಾರ್ಯಕ್ರಮ ನಡೆಯಿತು. ಸಮಾಜದ ಅಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಾಕಿ ಸಂಸ್ಥೆಯ ಅಧ್ಯಕ್ಷÀ ಅಯ್ಯುಡ ವೇಣು ಉತ್ತಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಊರೋರ್ಮೆ ಅಂಗವಾಗಿ ಮಕ್ಕಳು ಸೇರಿದಂತೆ ಸಮುದಾಯ ಬಾಂಧವರಿಗೆ ವಿವಿಧ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆದವು. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸ್ಪರ್ಧಾ ಕಾರ್ಯಕ್ರಮದ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಸಮಾಜಕ್ಕೆ ಧನ ಸಹಾಯ ಮಾಡಿದ ದಾನಿಗಳನ್ನು ಈ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭ ಸಮಾಜದ ಉಪಾಧ್ಯಕ್ಷÀ ಐಯಲಪಂಡ ಮಂದಣ್ಣ, ಕಾರ್ಯದರ್ಶಿ ಪುಲಿಯಂಡ ಚಂಗಪ್ಪ ಸೇರಿದಂತೆ ನಿರ್ದೇಶಕರು ಇದ್ದರು.