ನಾಪೆÉÇೀಕ್ಲು, ಜ. 7: ಸ್ಥಳೀಯ ಕೊಡವ ಸಮಾಜದ ವಾರ್ಷಿಕ ಮಹಾಸಭೆಯಲ್ಲಿ ಕಾವೇರಿಯ ಪಾವಿತ್ರ್ಯತೆ ಕಾಪಾಡಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕೆಂದು ಒಕ್ಕೊರಲಿನ ನಿರ್ಣಯ ಕೈಗೊಳ್ಳಲಾಯಿತು.ನಾಪೆÇೀಕ್ಲು ಕೊಡವ ಸಮಾಜದ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಾಜದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಶ್ರೀ ತಲಕಾವೇರಿ ಕ್ಷೇತ್ರವನ್ನು ಧಾರ್ಮಿಕ ಕ್ಷೇತ್ರವಾಗಿ ಘೋಷಿಸುವಂತೆ ನಿರ್ಣಯ ಕೈಗೊಳ್ಳಲಾಯಿತು. ಅಲ್ಲದೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಬೇಕು ಎಂದು ಒತ್ತಾಯಿಸಿದ ಸಭೆಯು, ಬ್ರಹ್ಮಗಿರಿ ಬೆಟ್ಟದಲ್ಲಿ ಸಪ್ತ ಋಷಿಗಳು ತಪಸ್ಸು ಮಾಡಿದ ಸ್ಥಳದಲ್ಲಿ ಸಪ್ತ ಕುಂಡಿಕೆಗಳು ಮಾಯವಾಗಿದ್ದು, ಅದೊಂದು ಅನೈತಿಕ ತಾಣವಾಗಿ ಮಾರ್ಪಡುವ ಲಕ್ಷಣಗಳು ಗೋಚರವಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿತು. ಈ ಬಗ್ಗೆ ಜಿಲ್ಲಾಡಳಿತ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು. ತಪ್ಪಿದ್ದಲ್ಲಿ ಜಿಲ್ಲೆಯ ಎಲ್ಲಾ ಕೊಡವ ಸಮಾಜಗಳ ಮತ್ತು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಾಪೆÇೀಕ್ಲುವಿನಿಂದ
(ಮೊದಲ ಪುಟದಿಂದ) ಭಾಗಮಂಡಲದವರೆಗೆ ಜಾಥಾ ನಡೆಸಿ ಪ್ರತಿಭಟಿಸಲಾಗುವದು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಜಿಲ್ಲೆಯ ಹೋಂ ಸ್ಟೇ ಮಾಲೀಕರು ತಮ್ಮಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಶ್ರೀ ತಲಕಾವೇರಿ ಮತ್ತು ಭಾಗಮಂಡಲದ ಶ್ರೀ ಭಗಂಡೇಶ್ವರ ಕ್ಷೇತ್ರ, ತ್ರಿವೇಣಿ ಸಂಗಮ ಧಾರ್ಮಿಕ ಕ್ಷೇತ್ರ ಎಂಬ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂಬ ಸಲಹೆಗಳು ಈ ಸಂದರ್ಭ ವ್ಯಕ್ತವಾಯಿತು.
ಈ ಕ್ಷೇತ್ರವನ್ನು ಧಾರ್ಮಿಕ ಕ್ಷೇತ್ರವಾಗಿ ಉಳಿಸುವ ನಿಟ್ಟಿನಲ್ಲಿ ಫೆಡರೇಷನ್ ಆಫ್ ಕೊಡವ ಸಮಾಜ ಗಂಭೀರವಾಗಿ ಚಿಂತನೆ ನಡೆಸಿ ಕ್ಷೇತ್ರದ ಪಾವಿತ್ರ್ಯತೆ ಉಳಿಸಲು ಪ್ರತಿಭಟನೆಯ ಮುಂದಾಳತ್ವ ವಹಿಸಬೇಕು ಎಂಬ ಸಲಹೆ ನೀಡಲಾಯಿತು.
ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಎಲ್ಲರೂ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಕೊಡವ ಸಂಸ್ಕøತಿ, ಆಚಾರ - ವಿಚಾರವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಮನೆ ಮನೆಯಲ್ಲೂ ಈ ಬಗ್ಗೆ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.
ಸಮಾಜದ ಉಪಾಧ್ಯಕ್ಷ ಮಾಳೆಯಂಡ ಅಯ್ಯಪ್ಪ, ಕಾರ್ಯದರ್ಶಿ ಮಂಡೀರ ರಾಜಪ್ಪ, ಸಹ ಕಾರ್ಯದರ್ಶಿ ಕನ್ನಂಬಿರ ಸುಧಿ ತಿಮ್ಮಯ್ಯ, ಖಜಾಂಚಿ ಅಪ್ಪಾರಂಡ ಸಧೀರ್ ಅಯ್ಯಪ್ಪ, ನಿರ್ದೇಶಕರಾದ ಉದಿಯಂಡ ಸುರ ನಾಣಯ್ಯ, ಕಾಟುಮಣಿಯಂಡ ಉಮೇಶ್, ಕುಂಡ್ಯೋಳಂಡ ವಿಶು ಪೂವಯ್ಯ, ಚೋಕಿರ ಸಜಿತ್, ಮುಕ್ಕಾಟಿರ ವಿನಯ್, ಮೂವೆರ ರೇಖಾ ಪ್ರಕಾಶ್ ಮತ್ತಿತರರು ಇದ್ದರು.