ಮಡಿಕೇರಿ, ಜ. 7: ತಾ. 9 ರಂದು ಕೊಡಗಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಾವೇಶದಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸ ಲಾಗುವದು ಮತ್ತು ಮುಖ್ಯಮಂತ್ರಿ ಗಳಿಂದ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಭರವಸೆಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ನಗರದ ಕ್ರಿಸ್ಟಲ್ ಕೋರ್ಟ್‍ನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು, 3 ಗಂಟೆಗೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಸಾರ್ವಜನಿಕರ ಬೃಹತ್ ಸಮಾವೇಶ ನಡೆಯಲಿದೆ ಎಂದರು.

ರೇಷ್ಮೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷÀ ಟಿ.ಪಿ. ರಮೇಶ್ ಮಾತನಾಡಿ, ಜಿಲ್ಲೆಯ 104 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳ ಬೂತ್ ಸಮಿತಿ ಮೂಲಕ ತಲಾ 20 ಮಂದಿ ಕಾರ್ಯಕರ್ತರಂತೆ 10 ಸಾವಿರಕ್ಕೂ ಹೆಚ್ಚಿನ ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಮನವಿ ಸಲ್ಲಿಸಲು ಇಚ್ಛಿಸುವ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಮುಖ್ಯಮಂತ್ರಿಗಳನ್ನು ಸುದರ್ಶನ ಅತಿಥಿ ಗೃಹದಲ್ಲಿ ಭೇಟಿಯಾಗಬಹುದೆಂದು ರಮೇಶ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಮುಖ ಬಿ.ಎಸ್. ತಮ್ಮಯ್ಯ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಸೀತಾರಾಂ ಅವರ ಪ್ರಯತ್ನದ ಫಲವಾಗಿಯೂ ಜಿಲ್ಲೆಗೆ ಹೆಚ್ಚುವರಿಯಾಗಿ 200 ಕೋಟಿ ರೂ. ಬಂದಿದೆಯೆಂದು ತಿಳಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘÀಟನೆಯ ಜಿಲ್ಲಾ ಸಂಯೋಜಕ ತೆನ್ನೀರ ಮೈನ ಉಪಸ್ಥಿತರಿದ್ದರು.

ಎಲ್ಲಾ ಜನಾಂಗದ ಅಭಿವೃದ್ಧಿ

ಗೋಣಿಕೊಪ್ಪ ವರದಿ: ಎಲ್ಲಾ ವರ್ಗಗಳಿಗೂ ಸಮಾನತೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

(ಮೊದಲ ಪುಟದಿಂದ) ಸರ್ಕಾರವು 4.5 ಕೋಟಿ ಅನುದಾನ ನೀಡುವ ಮೂಲಕ ತನ್ನ 5 ವರ್ಷಗಳ ಅವಧಿಯಲ್ಲಿ ಜನಾಂಗದ ಅಭಿವೃದ್ಧಿಗೆ ಪ್ರೋತ್ಸಾಹ ನೀಡಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಕೊರಕುಟ್ಟೀರ ಸರಾ ಚೆಂಗಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ದಿ. ದೇವರಾಜು ಅರಸು ಅವರ ಹೆಸರಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಭಿವೃದ್ಧಿಗೆ ಸಾಕಷ್ಟು ಪರಿಹಾರದ ಅನುದಾನ ನೀಡಿದ್ದಾರೆ. ಅರ್ಥಿಕ ಸ್ಥಿತಿಗತಿ ಮೂಲಕ ಹಿಂದುಳಿದ ವರ್ಗ ಎಂಬ ಯೋಜನೆ ರೂಪಿಸಿ, ಅಲ್ಪಸಂಖ್ಯಾತರು, ಕ್ರೈಸ್ತರು, ಜೈನರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಯೋಜನೆ ನೀಡಲಾಗಿದೆ. ಇದರಿಂದ 5 ವರ್ಷಗಳ ಅವಧಿಯಲ್ಲಿ ಕೊಡಗಿನ ಹಿಂದುಳಿದವರಿಗೆ ಪ್ರಯೋಜನವಾಗಿದೆ ಎಂದು ವಿವರಿಸಿದ್ದಾರೆ.