ಮಡಿಕೇರಿ, ಜ. 7: ಬಹುಜನ ವಿದ್ಯಾರ್ಥಿ ಸಂಘದಿಂದ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿಂದು ಕೋರೆಗಾಂವ್ ವಿಜಯೋತ್ಸವ-200 ವರ್ಷಗಳು ಮುಂದೇನು...? ಎಂಬ ವಿಷಯದಡಿ ಜಿಲ್ಲಾಮಟ್ಟದ ವಿಚಾರ ಸಂಕಿರಣ ನಡೆಯಿತು.ಜಿಲ್ಲಾಸ್ಪತ್ರೆ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಹೆಚ್.ವಿ. ದೇವದಾಸ್ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಬಿವಿಎಸ್‍ನ ಸಿ.ಜೆ. ಮೋಹನ್ ಮೌರ್ಯ ವಹಿಸಿದ್ದರು. ಅತಿಥಿಗಳಾಗಿ ದಲಿತ ಸಂಘರ್ಷ ಸಮಿತಿ ಸಂಚಾಲಕ ಹೆಚ್.ಎಲ್. ದಿವಾಕರ್, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಯ್ಸಿನ್, ಕೂಡಿಗೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಮಹಾಲಿಂಗಯ್ಯ, ಮಡಿಕೇರಿ ಎಫ್.ಎಂ. ಕಾಲೇಜು ಉಪನ್ಯಾಸಕರಾದ ಅತ್ನಿ ಮಹದೇವ್, ಪಿಎಫ್‍ಐ ಜಿಲ್ಲಾಧ್ಯಕ್ಷ ಹ್ಯಾರಿಸ್, ಬಿಎಸ್‍ಪಿ ಜಿಲ್ಲಾಧ್ಯಕ್ಷ ಹೆಚ್.ಎನ್. ಪ್ರೇಮ್‍ಕುಮಾರ್, ಭೂಮಿ ಮತ್ತು ವಸತಿ ವಂಚಿತ ಹೋರಾಟ ಸಮಿತಿ ಅಧ್ಯಕ್ಷ ಡಿ.ಎಸ್. ನಿರ್ವಾಣಪ್ಪ ಮತ್ತಿತರರು ಪಾಲ್ಗೊಂಡಿದ್ದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಬಿವಿಎಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.