ಮಡಿಕೇರಿ, ಜ. 7: ಕರಡ ವಿಜಯ ಬ್ಯಾಂಕ್ ಶಾಖೆಯಲ್ಲಿ ಉದ್ಯೋಗಿಯಾಗಿದ್ದ ಪಂದ್ಯಂಡ ಚಂಗಪ್ಪ (ಸುರೇಶ-53) ಅವರು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿದ್ದಾರೆ.

ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದಾಗ ತಕ್ಷಣ ಎಬ್ಬಿಸಿ ನೀರು ಕೊಟ್ಟಾಗ ಕುಡಿದರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಳಿಕ ಟ್ರಾಫಿಕ್ ಪೊಲೀಸರ ಗಮನಕ್ಕೆ ತಂದು ಅವರ ಸಲಹೆಯೊಂದಿಗೆ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಆಟೋರಿಕ್ಷಾದಲ್ಲಿ ಕರೆದೊಯ್ಯಲಾಗಿದೆ.

ಎದೆನೋವು ಕಾಣಿಸಿಕೊಂಡು ಕುಸಿದ ವೇಳೆ ಖಾಸಗಿ ಬಸ್ ನೌಕರರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಚಂಗಪ್ಪ ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಮೃತರು ಪತ್ನಿ, ಈರ್ವರು ಮಕ್ಕಳನ್ನು ಅಗಲಿದ್ದಾರೆ. ಮೃತರು ವೀರಾಜಪೇಟೆ ತಾಲೂಕು ಬೊಳ್ಳುಮಾಡು ನಿವಾಸಿ, ಕರಡ ವಿಜಯ ಬ್ಯಾಂಕ್ ಶಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.