ಮಡಿಕೇರಿ, ಜ. 8: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಡಿಕೇರಿ ವಲಯ ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಸಹಯೋಗದೊಂದಿಗೆ ತಾ.10 ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ.
ನಗರದ ಕಾವೇರಿ ಹಾಲ್‍ನಲ್ಲಿ ಬೆಳಿಗ್ಗೆ 8 ಗಂಟೆಗೆ ಪೂಜೆ ಆರಂಭಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಮೂಹಿಕ ಶ್ರೀಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷೆ ಲೀಲಾಶೇಷಮ್ಮ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಪಿ. ಅಪ್ಪಚು ರಂಜನ್, ನಗರಸಭಾ ಅಧ್ಯಕೆÀ್ಷ ಕಾವೇರಮ್ಮ ಸೋಮಣ್ಣ, ಕೊಡಗು ಜಿಲ್ಲಾ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅರಣ್ ಬಾನಂಗಡ, ಜಿಲ್ಲಾ ಜನಪದ ಪರಿಷತ್‍ನ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್, ನಗರಸಭಾ ಮಾಜಿ ಸದಸ್ಯ ಟಿ.ಎಂ. ಅಯ್ಯಪ್ಪ, 2ನೇ ಮೊಣ್ಣಂಗೇರಿ ಗ್ರಾ.ಪಂ ಸದಸ್ಯ ಧನಂಜಯ ಮೊಣ್ಣಂಗೇರಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಮಡಿಕೇರಿ ಆಕಾಶವಾಣಿಯ ಸುಬ್ರಾಯ ಸಂಪಾಜೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.