ಶನಿವಾರಸಂತೆ, ಜ. 8: ಸಮೀಪದ ಕೊಡ್ಲಿಪೇಟೆಯ ಪದವಿ ಕಾಲೇಜಿನ ಕಲಾ ಮತ್ತು ವಾಣಿಜ್ಯ ಸಂಘಗಳ ವತಿಯಿಂದ ಅಂತರ ಪಿಯು ಕಾಲೇಜು ವಿದ್ಯಾರ್ಥಿಗಳ ಪ್ರತಿಭೆ ಅನಾವರಣ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೊಡ್ಲಿಪೇಟೆ ವಿದ್ಯಾಸಂಸ್ಥೆ ಉಪಾಧ್ಯಕ್ಷ ಎಸ್.ಎಸ್. ನಾಗರಾಜ್ ಅತಿಥಿಯಾಗಿ ಪಾಲ್ಗೊಂಡಿದ್ದರು.
ವಿದ್ಯಾಸಂಸ್ಥೆ ನಿರ್ದೇಶಕ ಡಾ. ಉದಯಕುಮಾರ್, ಕಾರ್ಯದರ್ಶಿ ಪರಮೇಶ್, ಪದವಿ ಕಾಲೇಜ್ ಪ್ರಾಂಶುಪಾಲ ನಿರಂಜನ್ ಮಾತನಾಡಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಮಮತಾ ಸತೀಶ್, ಪ್ರಾಂಶುಪಾಲರು, ಪ್ರತಿಭಾ ಸ್ಪರ್ಧಾ ಕಾರ್ಯಕ್ರಮದಲ್ಲಿ ಸೋಮವಾರಪೇಟೆ, ಸಕಲೇಶಪುರ ತಾಲೂಕುಗಳ 9 ಪಿಯು ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.