ಸೋಮವಾರಪೇಟೆ,ಜ.7: ಸಮೀಪದ ತೋಳೂರುಶೆಟ್ಟಳ್ಳಿ ಮೊಗೇರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾ. 26ರಂದು ನೇತಾಜಿ ನಗರದಲ್ಲಿ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ-ಮೊಗೇರ ಕಪ್ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಐ.ಕೆ. ಹರೀಶ್ ತಿಳಿಸಿದ್ದಾರೆ.
ತಾ. 26ರಂದು ಸಂಜೆ 6 ಗಂಟೆಯಿಂದ ಹೊನಲು ಬೆಳಕಿನ ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದ್ದು, ಪ್ರಥಮ ಬಹುಮಾನವಾಗಿ ಆಕರ್ಷಕ ಟ್ರೋಫಿ ಮತ್ತು 15 ಸಾವಿರ ನಗದು ಬಹುಮಾನ, ದ್ವಿತೀಯ 10 ಸಾವಿರ ನಗದು, ತೃತೀಯ 5 ಸಾವಿರ ನಗದು ಹಾಗೂ ಬಹುಮಾನ ನೀಡಲಾಗು ವದು ಎಂದು ಮಾಹಿತಿ ನೀಡಿದ್ದಾರೆ.
ಈ ಪ್ರಯುಕ್ತ ತಾ. 26ರಂದು ಬೆಳಿಗ್ಗೆ 9 ಗಂಟೆಯಿಂದ ಪುರುಷರು ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ, ಶಾಲಾ ವಿದ್ಯಾರ್ಥಿಗಳಿಗೆ ಕಬಡ್ಡಿ ಪಂದ್ಯಾಟ, ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ, ಪ್ರಾಥಮಿಕ ಶಾಲಾ ಮಕ್ಕಳಿಗೆ ಓಟದ ಸ್ಪರ್ಧೆ, ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ಡಗಾಡು ಓಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಹರೀಶ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರಿಗೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದ ಕೆಲ ಸರ್ಕಾರಿ ಅಧಿಕಾರಿಗಳು ಮತ್ತು ರಾಜ್ಯಮಟ್ಟದ ಕಬಡ್ಡಿ ಆಟಗಾರರಿಗೆ ಸನ್ಮಾನ ಮಾಡಲಾಗು ವದು. ಕ್ರೀಡಾಕೂಟದ ಬಗ್ಗೆ ಹೆಚ್ಚಿನ ಮಾಹಿತಿಗೆ ಮೊ. 9449923847, 9483843215 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.