ಕೂಡಿಗೆ, ಜ. 8: ಕೂಡಿಗೆ ಗ್ರಾಮ ಪಂಚಾಯ್ತಿಯ ಉಪಾಧ್ಯಕ್ಷ ಕೆ.ಟಿ.ಗಿರೀಶ್ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸಮ್ಮುಖದಲ್ಲಿ ಕೆ.ಟಿ.ಗಿರೀಶ್ ಹಾಗೂ ಮಲ್ಲೇನಹಳ್ಳಿ ಗ್ರಾಮದ ಮಂಜುನಾಥ್ ಬಿಜೆಪಿಗೆ ಸೇರ್ಪಡೆಗೊಂಡರು.

ಈ ಸಂದರ್ಭ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯುಕುಮಾರ್, ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ. ಭೋಗಪ್ಪ, ಕೂಡಿಗೆ ಬಿಜೆಪಿ ಸ್ಥಾನೀಯ ಸಮಿತಿಯ ಅಧ್ಯಕ್ಷ ಶಾಂತಳ್ಳಿ ಜಗದೀಶ್, ಕೂಡುಮಂಗಳೂರು ಯುವ ಮೋರ್ಚಾದ ಅಧ್ಯಕ್ಷ ಶಶಿಕಿರಣ್, ಕೂಡಿಗೆ ಯುವ ಮೋರ್ಚಾದ ಅಧ್ಯಕ್ಷ ಬೊಮ್ಮಯ್ಯನ ಚಿಣ್ಣಪ್ಪ, ಉಪಾಧ್ಯಕ್ಷ ಧನುಕುಮಾರ್ ಮತ್ತು ಅನೇಕ ಕಾರ್ಯಕರ್ತರು ಇದ್ದರು.