ಮಡಿಕೇರಿ, ಜ. 9: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆಸಲಾಗುವ ಪ್ರೌಢಶಾಲಾ ವಿದ್ಯಾರ್ಥಿಗಳ ಮಡಿಕೇರಿ ಹೋಬಳಿ ಮಟ್ಟದ ‘ಶುದ್ಧಬರಹ’ (ಪ್ರಬಂಧ) ಸ್ಪರ್ಧೆಯನ್ನು ತಾ. 10 ರಂದು (ಇಂದು) ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿರುವ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಶಾಲಾ ಮಟ್ಟದಲ್ಲಿ ಆಯ್ಕೆ ಮಾಡಿದ ಎರಡು ವಿದ್ಯಾರ್ಥಿಗಳು ಭಾಗವಹಿಸುವಂತೆ ಕೋರಲಾಗಿದೆ. ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದ ವಿಜೇತರಿಗೆ ಅಪರಂಜಿ ಚಿನ್ನದ ಆಕರ್ಷಕ ಬಹುಮಾನ ನೀಡಲಾಗುತ್ತದೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.