ಮಡಿಕೇರಿ, ಜ. 10: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ತಾ. 11 ರಂದು (ಇಂದು) ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮಾಧ್ಯಮ ಕಾರ್ಯಾಗಾರ ಆಯೋಜಿಸಲಾಗಿದೆ. ಕಾಲೇಜು, ಕಾಲೇಜು ಹಳೆಯ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 11 ಗಂಟೆಗೆ ಪ್ರಾಂಶುಪಾಲೆ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅಧ್ಯಕ್ಷತೆ, ಮುಖ್ಯ ಅತಿಥಿಗಳಾಗಿ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮೊಣ್ಣಂಡ ಶೋಭಾ ಸುಬ್ಬಯ್ಯ, ಕಾರ್ಯದರ್ಶಿ ಬೊಪ್ಪಂಡ ಶ್ಯಾಂ ಪೂಣಚ್ಚ, ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ‘ಕಾವೇರಿ ಟೈಮ್ಸ್’ ಪ್ರಕಾಶÀಕ ಬೊಳ್ಳಜೀರ ಬಿ. ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆಂದು ಪ್ರೆಸ್‍ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಬಿ.ಮಂಜುನಾಥ್ ತಿಳಿಸಿದ್ದಾರೆ.

ಸ್ಥಳೀಯ ಪತ್ರಿಕೆಗಳ ಪ್ರಾಮುಖ್ಯತೆ ಮತ್ತು ಸವಾಲು ವಿಷಯದ ಕುರಿತು ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಿರುವ ಉದ್ಯೋಗಾವಕಾಶ ವಿಷಯದ ಕುರಿತು ವಿಶ್ವವಾಣಿ ಜಿಲ್ಲಾ ವರದಿಗಾರ ಎಚ್.ಟಿ. ಅನಿಲ್, ಮಾಧ್ಯಮ ಬರಹ ವಿಷಯದ ಕುರಿತು ಚಿತ್ತಾರ ವಾಹಿನಿ ಸಂಪಾದಕ ಆನಂದ ಕೊಡಗು ವಿಷಯ ಮಂಡಿಸಲಿದ್ದಾರೆ. ಮಾಧ್ಯಮ ಕಾರ್ಯಾಗಾರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಪತ್ರಿಕಾಗೋಷ್ಠಿ ವರದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದ ವರದಿ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುತ್ತದೆ.