ನಾಪೆÇೀಕ್ಲು, ಜ. 10: ಎಲ್ಲರೂ ಕನ್ನಡಕ್ಕೆ ಹೆಚ್ಚಿನ ಮಾನ್ಯತೆ ನೀಡುವದರೊಂದಿಗೆ ತಮ್ಮ ಅನ್ನದ ಭಾಷೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಕರೆ ನೀಡಿದರು.
ಸ್ಥಳೀಯ ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ದಿ. ಡಿ.ಜಿ. ಪದ್ಮನಾಭ ದತ್ತಿನಿಧಿ ಉಪನ್ಯಾಸ ಮತ್ತು ನಾಪೆÇೀಕ್ಲು ಹೋಬಳಿ ಕ.ಸಾ.ಪ. ಘಟಕ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಸಾಹಿತ್ಯ ಪರಿಷತ್ ಯೋಜನೆಯ ಫಲ ದೊರೆಯುವಂತಾಗಬೇಕು. ಶಿಕ್ಷಣದ ಜೊತೆ ಸಾಹಿತ್ಯ, ಕಲೆ, ಕ್ರೀಡೆಯಲ್ಲಿ ಸಾಧನೆ ಮಾಡಿದರೆ ದೇಶಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ. ಇದಕ್ಕಾಗಿ ಎಲ್ಲಾ ಶಾಲೆಗಳಲ್ಲಿಯೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಜೇತರಿಗೆ ಚಿನ್ನದ ನಾಣ್ಯಗಳನ್ನು ಬಹುಮಾನವಾಗಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಬೊಪ್ಪಂಡ ಡಾ. ಜಾಲಿ ಬೋಪಯ್ಯ ಕನ್ನಡದ ಬಗ್ಗೆ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್‍ನಿಂದ ಹೆಚ್ಚಿನ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.
ನಿವೃತ್ತ ಪ್ರಾಂಶುಪಾಲ ಕಲ್ಯಾಟಂಡ ಪೆÇ್ರ. ಪೂಣಚ್ಚ ಮಾತನಾಡಿ ಇತ್ತೀಚಿನ ಆಂಗ್ಲ ಮಾಧ್ಯಮ ಭಾಷೆಯ ಒಲವಿನಿಂದ ವಿದ್ಯಾರ್ಥಿಗಳ ಕನ್ನಡದ ಉಚ್ಛಾರಣೆಯಲ್ಲಿ ಸ್ಪಷ್ಟತೆಯ ಕೊರತೆ ಕಾಣುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ರಾಷ್ಟ್ರದ ಮೂರು ಭಾಷೆಗಳನ್ನು ಸಂಪೂರ್ಣವಾಗಿ ಕಲಿಯಬೇಕು. ಇಂಗ್ಲೀಷ್‍ನಂತೆ ಕನ್ನಡಕ್ಕೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಎಲ್ಲಾ ವಿಚಾರಗಳ ಸಾಮರಸ್ಯವಿದ್ದಲ್ಲಿ ಮಾತ್ರ ಸಾಹಿತ್ಯವಿರುತ್ತದೆ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಮಾತನಾಡಿ, ಕನ್ನಡದ ಬಗ್ಗೆ ಅಭಿಮಾನವಿರಬೇಕು. ಮಕ್ಕಳು ತಮ್ಮ ಮನೆಯಲ್ಲಿ ತಮ್ಮ ಮಾತೃಭಾಷೆಯನ್ನು ಮಾತನಾಡುವ ಕಾರಣ ಕನ್ನಡ ಕಲಿಕೆಯಲ್ಲಿ ಹಿನ್ನಡೆಯಾಗಿದೆ. ಆದುದರಿಂದ ಎಲ್ಲರೂ ಕನ್ನಡ ಬಗ್ಗೆ ಒಲವು ಬೆಳೆಸಿಕೊಳ್ಳಬೇಕು ಎಂದರು.
ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕನ್ನಡ ಭಾಷಾ ಶಿಕ್ಷಕಿ ಉಷಾರಾಣಿ ‘ಕೊಡಗಿನಲ್ಲಿ ಜಾನಪದ ಕಲೆ ಮತ್ತು ಸಂಸ್ಕøತಿಯ ಬೆಳವಣಿಗೆ’ ಎಂಬ ಬಗ್ಗೆ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಪ್ರಾಂಶುಪಾಲೆ ಬಿ.ಎಂ. ಶಾರದ, ತಾಲೂಕು ಪಂಚಾಯಿತಿ ಸದಸ್ಯರಾದ ನೆರೆಯಂಡಮ್ಮಂಡ ಉಮಾಪ್ರಭು, ಕೋಡಿಯಂಡ ಇಂದಿರಾ ಹರೀಶ್, ಜಿಲ್ಲಾ ಕ.ಸಾ.ಪ. ಗೌರವ ಕಾರ್ಯದರ್ಶಿ ಕೆ.ಎಸ್. ರಮೇಶ್, ತಾಲೂಕು ಗೌರವ ಕಾರ್ಯದರ್ಶಿ ಡಾ. ಕೆ. ದಯಾನಂದ್, ಹಿರಿಯ ಸದಸ್ಯ ಬೊಪ್ಪೇರ ಕಾವೇರಪ್ಪ, ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಶಿಕ್ಷಕ ಸಿ.ಎಸ್. ಸುರೇಶ್, ಶ್ರೀ ರಾಮಟ್ರಸ್ಟ್ ಶಾಲೆಯ ಶಿಕ್ಷಕಿ ಟಿ.ಆರ್. ಸುಬ್ಬಮ್ಮ ಇದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ನಾಪೆÇೀಕ್ಲು ಹೋಬಳಿ ಘಟಕದ ಅಧ್ಯಕ್ಷರಾಗಿ ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಗಣಿತ ಶಿಕ್ಷಕ ಸಿ.ಎಸ್. ಸುರೇಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಭಾಗಮಂಡಲ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎನ್.ಕೆ. ಪ್ರಭು ಆಯ್ಕೆಯಾಗಿದ್ದಾರೆ. ಸಮಾರಂಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ನೂತನವಾಗಿ ಆಯ್ಕೆಗೊಂಡ ಘಟಕದ ಅಧ್ಯಕ್ಷರಿಗೆ ಕನ್ನಡ ಧ್ವಜವನ್ನು ಹಸ್ತಾಂತರಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ನಾಪೆÇೀಕ್ಲು ಹೋಬಳಿ ಘಟಕದ ಹಿರಿಯ ಸಲಹೆಗಾರರಾಗಿ ನಿವೃತ್ತ ನೌಕರ ಬಿ.ಸಿ. ಕಾವೇರಪ್ಪ, ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಬೊಪ್ಪಂಡ ಜಾಲಿ ಬೋಪಯ್ಯ, ನಿವೃತ್ತ ಪ್ರ್ರಾಂಶುಪಾಲ ಕಲ್ಯಾಟಂಡ ಪೂಣಚ್ಚ ಆಯ್ಕೆಯಾಗಿದ್ದಾರೆ. ಸಂಘಟನಾ ಕಾರ್ಯದರ್ಶಿಗಳಾಗಿ ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಟಿ.ಆರ್. ಸುಬ್ಬಮ್ಮ, ಶೋಭಾ ಹಾಗೂ ಮಾಧ್ಯಮ ಕಾರ್ಯದರ್ಶಿಯಾಗಿ ಪಿ.ವಿ. ಪ್ರಭಾಕರ್ ಆಯ್ಕೆಯಾಗಿದ್ದಾರೆ.