ಮಡಿಕೇರಿ, ಜ. 10: ಯುವ ಜನ ಸಮುದಾಯದಲ್ಲಿ ಪ್ರಾಥಮಿಕ ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ರಾಜ್ಯಶಾಸ್ತ್ರ ಮತ್ತು ಪತ್ರಿಕೋದ್ಯಮ ವಿಭಾಗ, ಎಫ್.ಎಂ.ಕೆ.ಎಂ.ಸಿ. ಕಾಲೇಜು, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ವನ್ನು ತಾ. 12 ರಂದು ಬೆಳಿಗ್ಗೆ 10.15 ಕ್ಕೆ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಆರ್‍ಕೆಜಿ ಎಂ.ಎಂ. ಮಹಾ ಸ್ವಾಮೀಜಿ, ಅಪರ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‍ಸಿ ಶರ್ಮಿಳಾ ಕಾಮತ್ ಕೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಡಾ ಪಾರ್ವತಿ ಅಪ್ಪಯ್ಯ ಭಾಗವಹಿಸಲಿದ್ದಾರೆ.