ಮಡಿಕೇರಿ, ಜ. 10 : ಭಾರತೀಯ ಧರ್ಮ ಸಂಸ್ಕøತಿಯನ್ನು ಪÀÅನರುತ್ಥಾನಗೊಳಿಸಿ ವಿಶ್ವದ ಗಮನ ಸೆಳೆದ ಸ್ವಾಮಿ ವಿವೇಕಾನಂದರ ಜಯಂತಿಯನ್ನು ತಾ. 12 ರಂದು ನಗರದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಗುವ ದೆಂದು ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷ್ಷೆ ಯಮುನಾ ಚಂಗಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ನಗರ ಬಿಜೆಪಿ ಮಹಿಳಾ ಮೋರ್ಚಾ ಸಹಕಾರದೊಂದಿಗೆ ಇಲ್ಲಿನ ಚೌಕಿ ಬಳಿಯಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಮೆರವÀಣಿಗೆ ನಡೆಸಿ, ಬಿಜೆಪಿ ಕಛೇರಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಗುವದೆಂದರು.
ಯುವ ಸಮೂಹವನ್ನು ಜಾಗೃತರನ್ನಾಗಿಸುವ ಮೂಲಕ ರಾಷ್ಟ್ರದ ಅಭ್ಯುದಯಕ್ಕೆ ಮಾರ್ಗವನ್ನು ಸೂಚಿಸಿದ್ದ ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಅವರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸುತ್ತಿರು ವದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಮೋರ್ಚಾದ ನಗರ ಘÀಟಕದ ಅಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್ ಉಪಸ್ಥಿತರಿದ್ದರು.