ಮಡಿಕೇರಿ, ಜ. 10: ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ತಾ.ಪಂ. ಸದಸ್ಯ ಅಪ್ರು ರವೀಂದ್ರ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಆಯ್ಕೆ ಮಾಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ತಿಳಿಸಿದ್ದಾರೆ.
ಕೆ.ಎಂ. ಗಣೇಶ್ ಅವರಿಂದ ತೆರವಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಪ್ರಬಾರವಾಗಿ ಕಾನೆಹಿತ್ಲು ಮೊಣ್ಣಪ್ಪ ಅವರು ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯಾಧ್ಯಕ್ಷರು ಅಪ್ರುರವೀಂದ್ರ ಅವರನ್ನು ಬ್ಲಾಕ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ತಾ. 11 ರಂದು (ಇಚಿದು) ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.