ಮಡಿಕೇರಿ, ಜ. 10: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು ಅರೆಭಾಷೆ ಯಕ್ಷಗಾನ ತಂಡ ರಚಿಸುವ ಸಲುವಾಗಿ ಯಕ್ಷಗಾನ ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರೆಭಾಷೆಯಲ್ಲಿ ಯಕ್ಷಗಾನ ತರಬೇತಿ ಪಡೆಯಲು ಆಸಕ್ತಿ ಹೊಂದಿರುವವರು ಅವರ ವಿಳಾಸ, ಭಾವಚಿತ್ರ ಹಾಗೂ ದೂರವಾಣಿ ಸಂಖ್ಯೆಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08272-223055 ರಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಮೊ. 9448462163, 9448625224 ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಾ. 30 ಕೊನೆಯ ದಿನಾಂಕವಾಗಿದೆ.