ಮಡಿಕೇರಿ, ಜ. 11: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಮಾಧ್ಯಮ ಕಾರ್ಯಾಗಾರ ಅರ್ಥಪೂರ್ಣವಾಗಿ ನೆರವೇರಿತು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಳೆಯ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂಯುಕ್ತಾಶ್ರಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಾಗಾರ ಪ್ರಯುಕ್ತ ಸುದ್ದಿಗೋಷ್ಠಿ ವರದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮ ವರದಿ ಸ್ಪರ್ಧೆ ಆಯೋಜಿಸಲಾಗಿತ್ತು. ಕೊಡಗಿಗೆ ಪ್ರವಾಸೋದ್ಯಮದ ಸಾಧಕ- ಬಾಧಕ, ಕೊಡಗಿನ ಪರಿಸರದ ಪ್ರಾಮುಖ್ಯತೆ ವಿಷಯ ಕುರಿತು ಭಾಷಣ ಸ್ಪರ್ಧೆ ನಡೆಯಿತು.

ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಿಎ ವಿದ್ಯಾರ್ಥಿನಿ ವೇದಶ್ರೀ (ಪ್ರ), ಪ್ರಥಮ ಬಿಎ ವಿದ್ಯಾರ್ಥಿ ಅಕ್ಷಯ್ ರೈ (ದ್ವಿ), ತೃತೀಯ ಬಿಎ ವಿದ್ಯಾರ್ಥಿನಿ ಮೋಕ್ಷಾ ರೈ (ತೃ), ಪತ್ರಿಕಾಗೋಷ್ಠಿ ವರದಿಗಾರಿಕೆಯಲ್ಲಿ ಪ್ರಥಮ ಬಿಎ ವಿದ್ಯಾರ್ಥಿನಿ ವೇದಶ್ರೀ (ಪ್ರ), ಪ್ರಥಮ ಬಿಎ ವಿದ್ಯಾರ್ಥಿನಿ ತೇಜಶ್ವರಿ (ದ್ವಿ), ತೃತೀಯ ಬಿಎ ವಿದ್ಯಾರ್ಥಿ ಲಿಖಿತ್ (ತೃ)., ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ವರದಿಗಾರಿಕೆಯಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿ ಆಶಾ (ಪ್ರ), ಪ್ರಥಮ ಬಿಎ ವಿದ್ಯಾರ್ಥಿ ಭವ್ಯ (ದ್ವಿ) ಪ್ರಥಮ ಬಿಎ ವಿದ್ಯಾರ್ಥಿ ತಮ್ಮಯ್ಯ (ತೃ) ಬಹುಮಾನ ಪಡೆದರು.

ಸ್ಥಳೀಯ ಪತ್ರಿಕೆಯ ಪ್ರಾಮುಖ್ಯತೆ ಮತ್ತು ಸವಾಲು ವಿಷಯದ ಕುರಿತು ವಿಷಯ ಮಂಡಿಸಿದ ಶಕ್ತಿ ಪತ್ರಿಕೆ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ಸ್ಥಳೀಯ ಪತ್ರಿಕೆ ಮಾಲೀಕರು ಮತ್ತು ವರದಿಗಾರರು ಕಠಿಣ ಸವಾಲು ಎದುರಿಸಬೇಕಾಗುತ್ತದೆ. ತಮ್ಮ ಪ್ರತಿಯೊಂದು ವರದಿಯ ಬಗ್ಗೆಯೂ ಪ್ರಶ್ನೆಗಳನ್ನು ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ತೀಕ್ಷ್ಣ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದರು.

ಹಿತ್ತಲಗಿಡ ಮದ್ದಲ್ಲ ಎಂಬ ಭಾವನೆ ಸಣ್ಣ ಪತ್ರಿಕೆಗಳ ಬಗ್ಗೆ ಸರ್ಕಾರ ಮತ್ತು ದೊಡ್ಡ ವ್ಯಕ್ತಿಗಳಲ್ಲಿದೆ. ರಾಜ್ಯಮಟ್ಟದ ಪತ್ರಿಕೆಗಳಿಗೆ ದೊರೆಯುವ ಜಾಹೀರಾತು ಸ್ಥಳೀಯ ಪತ್ರಿಕೆಗಳಿಗೆ ದೊರೆಯುವದಿಲ್ಲ. ಪ್ರತಿಕೂಲ ಪರಿಸ್ಥಿತಿ ನಡುವೆ ಪತ್ರಿಕೆ ನಡೆಸಬೇಕಾಗುತ್ತದೆ. ಅನಾರೋಗ್ಯಕರ ಸ್ಪರ್ಧೆ ಎದುರಿಸಬೇಕಾಗುತ್ತದೆ. ಪತ್ರಕರ್ತರು ಪ್ರತಿಯೊಂದು ವಿಷಯದ ಪರಿಜ್ಞಾನ ಹೊಂದುವದರೊಂದಿಗೆ ಕಠಿಣ ಸವಾಲುಗಳನ್ನು ಎದುರಿಸಲು ಸಜ್ಜಾಗಿರಬೇಕೆಂದರು.

ಮಾಧ್ಯಮ ಕ್ಷೇತ್ರದಲ್ಲಿನ ಉದ್ಯೋಗಾವಕಾಶದ ಕುರಿತು ವಿಷಯ ಮಂಡಿಸಿದ ವಿಶ್ವವಾಣಿ ಜಿಲ್ಲಾ ವರದಿಗಾರ ಎಚ್.ಟಿ. ಅನಿಲ್, ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಪತ್ರಿಕೋದ್ಯಮ ವಿದ್ಯಾರ್ಥಿಗಳು ಈಗಲೇ ಬರೆಯುವದನ್ನು ರೂಢಿಸಿಕೊಳ್ಳಬೇಕು. ತಮ್ಮ ವಿಶೇಷ ವರದಿ ಪ್ರಕಟವಾದಲ್ಲಿ ಉದ್ಯೋಗ ನಿಶ್ಚಿತ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಸಾಕಷ್ಟು ಉದ್ಯೋಗಾವಕಾಶವಿದೆ ಎಂದರು.

ವಿದ್ಯಾರ್ಥಿಗಳು ಪ್ರತಿಯೊಂದು ವಿಷಯದ ಬಗ್ಗೆಯೂ ಬರೆಯಬಹುದಾಗಿದೆ. ಈಗ ಎಲ್ಲಾ ಪತ್ರಿಕೆಗಳಿಗೆ ವರದಿ ಕಳುಹಿಸುವದರ ಮೂಲಕ ತಮ್ಮನ್ನು ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡಬೇಕು. ಬರೆಯುವ ಮನಸ್ಸು ಬೆಳೆಸಿಕೊಳ್ಳಬೇಕು ಎಂದರು.

ಎಫ್‍ಎಂಸಿ ಕಾಲೇಜು ಹಳೆಯ ವಿದ್ಯಾರ್ಥಿ ಸಂಘ ಅಧ್ಯಕ್ಷೆ ಮೊಣ್ಣಂಡ ಶೋಭಾ ಸುಬ್ಬಯ್ಯ ಮಾತನಾಡಿ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ ಆಗಲಿ ಎಂಬ ಉದ್ದೇಶದಿಂದ ಮಾಧ್ಯಮ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶವಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಯೋಗಾಲಯ ಸ್ಥಾಪಿಸಲು ಮಂಗಳೂರು ವಿವಿ ಸಿಂಡಿಕೇಟ್‍ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅತಿಥಿ ಉಪನ್ಯಾಸಕರು ಖಾಯಂ ಉಪನ್ಯಾಸಕರ ಮಾದರಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಪತ್ರಿಕೋದ್ಯಮ ವಿದ್ಯಾರ್ಥಿಗಳು ಪ್ರಾಯೋಗಿಕ ಅನುಭವ ಪಡೆಯಲು ವರದಿ ಮಾಡುವದನ್ನು ರೂಢಿಸಿ ಕೊಳ್ಳಬೇಕೆಂದರು. ಮುಖ್ಯ ಅತಿಥಿಯಾಗಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬೊಪ್ಪಂಡ ಶ್ಯಾಂ ಪೂಣಚ್ಚ, ಕಾವೇರಿ ಟೈಮ್ಸ್ ಪ್ರಕಾಶಕ ಬೊಳ್ಳಜೀರ ಬಿ. ಅಯ್ಯಪ್ಪ ಪಾಲ್ಗೊಂಡಿದ್ದರು.

ಮೋಕ್ಷಾ ರೈ ನಿರೂಪಿಸಿದರು. ಮೊಣ್ಣಂಡ ಶೋಭಾ ಸುಬ್ಬಯ್ಯ