ಕೂಡಿಗೆ, ಜ. 11: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಸಿದ ರಾಜ್ಯ ಮಟ್ಟದ ಭಾವಗೀತೆ ಸ್ಪರ್ಧೆಯಲ್ಲಿ ಕೊಡಗಿನ ಸಂವೇದಿತಾ ಸುಭಾಷ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದ ಸಂವೇದಿತಾ ರಾಜ್ಯ ಮಟ್ಟದ ಭಾವಗೀತೆ ಸ್ಪಧೆರ್ಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ಕುಶಾಲನಗರದ ಸುಭಾಷ್ ಹಾಗೂ ವೇದಾ ದಂಪತಿಯ ಪುತ್ರಿ ಸಂವೇದಿತಾ ಕುಶಾಲನಗರದ ಫಾತಿಮಾ ಕಾನ್ವೆಂಟ್ ಕಾಂಪೋಸಿಟ್ ಪಿ.ಯು. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.