ಕೂಡಿಗೆ, ಜ. 11: ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಾರ್ಷಿಕೋತ್ಸವ ಹಾಗೂ ದಶಮಾನೋತ್ಸವ ಸಮಾರಂಭವು ತಾ. 13ರಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಮಾರಂಭವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್ ಉದ್ಘಾಟಿಸಲಿದ್ದು, ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಬಾಳೆಲೆ ವಿಜಯಲಕ್ಷ್ಮಿ ಪ.ಪೂ ಕಾಲೇಜಿನ ಉಪನ್ಯಾಸಕ ಡಾ.ಜೆ.ಸೋಮಣ್ಣ ಅವರು ಆಗಮಿಸಲಿದ್ದಾರೆ.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಮೂಕೊಂಡ ಪಿ.ಸುಬ್ರಮಣಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ಹೆಚ್.ಆರ್.ಶ್ರೀನಿವಾಸ್, ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ಸೋಮವಾರಪೇಟೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾರಾಜೇಶ್, ಸದಸ್ಯರಾದ ಡಿ.ಎಸ್. ಗಣೇಶ್, ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಿ ರವಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ಮೊದಲಾದವರು ಆಗಮಿಸಲಿದ್ದಾರೆ.