ಕುಶಾಲನಗರ, ಜ 11: ಕುಶಾಲನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾ. 12 ರಂದು (ಇಂದು) ರಕ್ತದಾನ ಶಿಬಿರ ನಡೆಯಲಿದೆ. ಯುವ ರೆಡ್‍ಕ್ರಾಸ್, ಎನ್ನೆಸ್ಸೆಸ್, ಹಳೆಯ ವಿದ್ಯಾರ್ಥಿ ಸಂಘ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಉದ್ಘಾಟಿಸಲಿದ್ದಾರೆ. ಕುಶಾಲನಗರ ರೋಟರಿ ಸಂಸ್ಥೆ ಆಶ್ರಯದಲ್ಲಿ ಬೆಂಗಳೂರಿನ ರಾಷ್ಟ್ರೋತ್ಥಾನ ಸಂಸ್ಥೆ ಸಹಯೋಗ ದೊಂದಿಗೆ ರೋಟರಿ ಕುಶಾಲನಗರದ 43ನೇ ವಾರ್ಷಿಕೋತ್ಸವ ಅಂಗವಾಗಿ ಸಾರ್ವಜನಿಕರಿಗೆ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆ ತನಕ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.