ಮಡಿಕೇರಿ, ಜ.12 :ಎಸ್‍ಎಸ್‍ಎಫ್ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭೋತ್ಸವ ತಾ.13 ಹಾಗೂ 14 ರಂದು ಅಯ್ಯಂಗೇರಿಯ ತಾಜುಲ್ ಉಲಮಾ ನಗರದಲ್ಲಿ ನಡೆಯಲಿದೆ. ಪತ್ರಿಕಾ ಹೇಳಿಕೆ ನೀಡಿರುವ ಪ್ರತಿಭೋತ್ಸವದ ಜಿಲ್ಲಾ ಸಂಚಾಲಕ ಮೊಹಮ್ಮದ್ ನಿಝಾರ್ ಸಖಾಫಿ ಕಡಂಗ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ್ದಾರೆ.

ಜೂನಿಯರ್, ಸೀನಿಯರ್, ಜನರಲ್, ಕ್ಯಾಂಪಸ್ಸ್, ದಹ್‍ವ ಒಳಗೊಂಡ ವಿಭಿನ್ನ ಏಳು ವಿಭಾಗಗಳ 94 ವೈವಿಧ್ಯಮಯ ಸ್ಪರ್ಧೆಗಳಲ್ಲಿ ಮುನ್ನೂರಕ್ಕೂ ಹೆಚ್ಚಿನ ಸ್ಪರ್ಧಿಗಳು ಪಾಲ್ಗೊಂಡು ತಮ್ಮ ಪ್ರತಿಭೆ ಅನಾವರಣಗೊಳಿಸಲಿದ್ದಾರೆ.

ಪ್ರಸ್ತುತ ಜಿಲ್ಲಾ ಮಟ್ಟದ ಪ್ರತಿಭೋತ್ಸವದಲ್ಲಿ ವಿಜೇತರಾದವರು ತಾ.19, 20,21 ರಂದು ಕೊಟ್ಟಮುಡಿಯ ಮರ್ಕಝ್ ಕ್ಯಾಂಪಸ್‍ನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಇತರ 26 ಜಿಲ್ಲೆಗಳಿಂದ ಆಯ್ಕೆಯಾದ ಪ್ರತಿಭೆಗಳೊಂದಿಗೆ ಸೆಣಸಲಿದ್ದಾರೆ. ಕಾರ್ಯಕ್ರಮಕ್ಕಿರುವ ಪೂರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಾಯಕ ಖಾಝಿ ಮಹ್ಮೂದ್ ಉಸ್ತಾದ್, ಎಸ್.ಎಸ್.ಎಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ, ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಯಾಕೂಬ್ ಕೊಳಕೇರಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಸೇರಿದಂತೆ ಸಮಾಜದ ವೈವಿಧ್ಯಮಯ ಮಜಲುಗಳಲ್ಲಿ ಕ್ರಿಯಾಶೀಲರಾದ ನಾಯಕರುಗಳು ವಿಭಿನ್ನ ಸೆಷನ್‍ಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.