ಗೋಣಿಕೊಪ್ಪಲು, ಜ. 12: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) ಹಾಗೂ ಪ್ರಬುದ್ಧ ನೌಕರರ ಒಕ್ಕೂಟದ ಸಹಯೋಗದಲ್ಲಿ ತಾ. 21 ರಂದು ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಆಯೋಜಿಸಲಾಗಿದೆ. ತರಬೇತಿಯಲ್ಲಿ ಐಎಎಸ್, ಐಪಿಎಸ್, ಐಎಫ್‍ಎಸ್ ಹಾಗೂ ಕೆಎಎಸ್ ವಿಷಯದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಅರಣ್ಯ ಸಂರಕ್ಷಣಾಧಿಕಾರಿ, ಕೆಎಎಸ್ ಅಧಿಕಾರಿ ಯಶ್ವಂತ್ ಅಣ್ಣಾಜಿ ಹಾಗೂ ಲಕ್ಷ್ಮಿ ಚಂದ್ರಶೇಖರ್ ತರಬೇತಿಯನ್ನು ನೀಡಲಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ವಿಭಾಗಿಯ ಸಂಚಾಲಕ ಎನ್. ವೀರಭದ್ರಯ್ಯ ಅವರನ್ನು (9449915621) ಸಂಪರ್ಕಿಸ ಬಹುದಾಗಿದೆ.