ನಾಪೆÇೀಕ್ಲು, ಜ. 12: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳಲ್ಲಿ ಬಿ.ಇ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಸುಳ್ಯದ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕೆ.ಎಸ್. ಅರ್ಪಿತಾ 5 ಚಿನ್ನದ ಪದಕಗಳೊಂದಿಗೆ ಪ್ರಥಮ ರ್ಯಾಂಕ್ ಪಡೆದಿರುತ್ತಾರೆ. ಪ್ರಸ್ತುತ ಇವರು ಕಾಲೇಜಿನ ಕ್ಯಾಂಪಸ್ ಆಯ್ಕೆ ವ್ಯವಸ್ಥೆಯ ಮೂಲಕ ಬೆಂಗಳೂರಿನ ಪ್ರತಿಷ್ಠಿತ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದು, ಸುಳ್ಯದ ಕವಿತ ಮತ್ತು ಕೆ. ಶಶಿಧರ ದಂಪತಿಯ ಪುತ್ರಿ.