ಶನಿವಾರಸಂತೆ, ಜ. 13: ದಲಿತ ಸಂಘರ್ಷ ಸಮಿತಿ ಮತ್ತು ಜೆ.ಡಿ.ಎಸ್. ಹೋಬಳಿ ಘಟಕದ ವತಿಯಿಂದ ವಿಜಯಪುರದ ದಲಿತ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿರುವದನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಮುಖ್ಯ ರಸ್ತೆಯಲ್ಲಿ ಧಿಕ್ಕಾರ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ನಾಡಕಚೇರಿಗೆ ತೆರಳಿ ಕಂದಾಯ ಪರಿವೀಕ್ಷಕ ಮಧುಸೂದನ್ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಸಭೆಯಲ್ಲಿ ಜೆ.ಆರ್. ಪಾಲಾಕ್ಷ, ಜೆ.ಡಿ.ಎಸ್. ವಕ್ತಾರ ಎಂ.ಎ. ಆದಿಲ್ ಪಾಶ, ದ.ಸಂ.ಸ. ಸಮಿತಿಯ ರವಿ ಮಾತನಾಡಿದರು.