ಕೂಡಿಗೆ, ಜ. 15: ರಾಜ್ಯ ಸರ್ಕಾರಿ ನೌಕರರಲ್ಲಿ ತಮ್ಮ ಕಾರ್ಯನಿರ್ವಹಿಸುವ ಸಂದರ್ಭ ತನ್ನ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಕರ್ತವ್ಯದ ಅರಿವಿನಿಂದ ಮಾಡಿದಾಗ ಕೆಲಸಗಳು ಸುಗಮವಾಗುತ್ತದೆ ಎಂದು ಜೆಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹಚ್.ಎ. ಶ್ರೀನಿವಾಸ ಅಭಿಪ್ರಾಯ ಪಟ್ಟರು.
ಕೂಡಿಗೆಯ ಸರಕಾರಿ ಕ್ರೀಡಾಶಾಲೆಯ ಆವರಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯೆ ಮಂಜುಳಾ ಮಾತನಾಡಿ, ನೌಕರರಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವದರಿಂದ ಎಲ್ಲರೂ ಒಗ್ಗೂಡುವಿಕೆ ಮತ್ತು ಸ್ನೇಹ ಮಿಲನಗೊಳ್ಳುವದು ಎಂದರು. ಡಯಟ್ ಪ್ರಾಂಶುಪಾಲರು, ತಾಲೂಕು ಶಿಕ್ಷಣಾಧಿಕಾರಿ ನಾಗರಾಜಯ್ಯ ಮಾತಾನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆಎಸ್. ಪ್ರಸನ್ನ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಪ್ರದೀಪ್, ಕ್ರೀಡಾ ಕಾರ್ಯದರ್ಶಿ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಎಂ. ಗಣೇಶ್, ಪ್ರಾಥÀಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಸಮಿತಿಯ ನಿರ್ದೇಶಕರುಗಳು ಹಾಗೂ ತಾಲೂಕು ಪಂಚಾಯಿತಿ ಸದಸ್ಯ ಗಣೇಶ್ ಹಾಜರಿದ್ದರು. ಇದರ ಅಂಗವಾಗಿ ಪಥÀಸಂಚಲನ ನಡೆದ ನಂತರ ವಿವಿಧ ಕ್ರೀಡಾಕೂಟಗಳು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ನಡೆದವು. ಕ್ರೀಡಾಕೂಟದಲ್ಲಿ 500ಕ್ಕೂ ಹೆಚ್ಚು ವಿವಿಧ ಇಲಾಖೆಯ ನೌಕರರು ಭಾಗವಹಿಸಿದ್ದರು.