ಕುಶಾಲನಗರ, ಜ. 15: ಕುಶಾಲನಗರ ರಥಬೀದಿಯಲ್ಲಿ ರಸ್ತೆ ಒತ್ತುವರಿ ಮಾಡಿದ್ದ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ನೇತೃತ್ವದಲ್ಲಿ ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು.

ರಥಬೀದಿಯಲ್ಲಿ ಏಕಮುಖ ಸಂಚಾರ ಇದ್ದು ಇಲ್ಲಿ ಎರಡೂ ಕಡೆಯಲ್ಲಿ ವ್ಯಾಪಾರಿಗಳು ತಮ್ಮ ಸಾಮಾನು ಸರಂಜಾಮುಗಳನ್ನು ರಸ್ತೆಯಲ್ಲಿ ಇರಿಸುವ ಕಾರಣ ಪಾದಾಚಾರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಪೌರಕಾರ್ಮಿಕರು ತೆರವು ಕಾರ್ಯದಲ್ಲಿ ತೊಡಗಿಸಿಕೊಂಡರು.