ಮೂರ್ನಾಡು, ಜ. 15: ಎಂ. ಬಾಡಗ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಕಾಂಕ್ರಿಟ್ ರಸ್ತೆಯನ್ನು ಉದ್ಘಾಟಿಸಲಾಯಿತು.
ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ. ಬಾಡಗ ಗ್ರಾಮದ ಭದ್ರಕಾಳಿ ದೇವಸ್ಥಾನಕ್ಕೆ ತೆರಳುವ ರಸ್ತೆಗೆ ಗ್ರಾಮ ಪಂಚಾಯಿತಿ ನಿಧಿಯಿಂದ 2 ಹಂತಗಳಲ್ಲಿ ರೂ. 2.50 ಲಕ್ಷ ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಿಸಲಾಯಿತು. ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೂತನವಾಗಿ ನಿರ್ಮಾಣಗೊಂಡ ಕಾಂಕ್ರಿಟ್ ರಸ್ತೆಯನ್ನು ಉದ್ಘಾಟಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಕಲಾವತಿ ಪೂವಪ್ಪ, ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ, ಉಪಾಧ್ಯಕ್ಷ ಕುಂಞಪ್ಪ ಪವಿತ್ರ, ಗ್ರಾಮ ಪಂಚಾಯಿತಿ ಸದಸ್ಯರು, ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.