ಮಡಿಕೇರಿ, ಜ. 15: ರಾಷ್ಟ್ರೀಯ 8ನೇ ಮತದಾರರ ದಿನಾಚರಣೆ ಸಂಬಂಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಬಂಧ, ಬಿತ್ತಿಪತ್ರ, ಕಾಲೇಜು ವಿಷಯಗಳಿಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ತಾ. 17 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಸಲಿದೆ. ಈಗಾಗಲೇ ವಿವಿಧ ಶಾಲಾ-ಕಾಲೇಜುಗಳಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9900457040 ಸಂಪರ್ಕಿಸಬಹುದು.