ವೀರಾಜಪೇಟೆ, ಜ. 15: ಪ್ರತಿ ವರ್ಷದಂತೆ ಈ ವರ್ಷವೂ ಹೆಚ್ಚು ಅರ್ಹ ಯುವ ಮತದಾರರನ್ನು ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ ಕೊಳ್ಳುವಂತೆ ಭಾರತ ಚುನಾವಣಾ ಆಯೋಗ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಉಪನ್ಯಾಸಕ ಚಾಲ್ರ್ಸ್ ಡಿಸೋಜ ಹೇಳಿದರು.
ವೀರಾಜಪೇಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಗೆ 18-19 ವರ್ಷದ ಯುವಕರು ಮತ್ತು ಯುವತಿಯರು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳುವಂತೆ ತಿಳಿಸಿದರು.
ಈ ಸಂದರ್ಭ ಮತದಾನದ ಮಹತ್ವದ ಬಗ್ಗೆ ತಾಲೂಕು ಕಚೇರಿಯ ಮಂಜುನಾಥ್, ಹೇಮಂತ್, ಪದವಿಪೂರ್ವ ಕಾಲೇಜಿನ ಅಂತೋಣಿ ಅಳ್ವರಿಸ್ ಮತನಾಡಿದರು.