ಮೂರ್ನಾಡು, ಜ. 15: ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಎಸ್. ಅನುಷಾ ಉದ್ಘಾಟಿಸಿದರು. ಮಡಿಕೇರಿ ಜಿಲ್ಲಾ ರಕ್ತನಿಧಿ ಕೇಂದ್ರ ತಿಲಕಮಣಿ ಮಾತನಾಡಿ, ರಕ್ತದಾನ ಮಾಡುವದರಿಂದ ಶರೀರದಲ್ಲಿ ಯಾವದೇ ತೊಂದರೆಗಳು ಉಂಟಾಗುವದಿಲ್ಲ. ಇದರಿಂದ ಹೆಚ್ಚಿನ ಉಪಯೋಗವಿದೆ. ಮನುಷ್ಯನಿಗೆ ರಕ್ತ ಅವಶ್ಯಕತೆ ಇದ್ದಲ್ಲಿ ರಕ್ತದಾನವೊಂದೆ ಮಾರ್ಗವಾಗಿದೆ ಎಂದರು. ಶಿಬಿರದಲ್ಲಿ 11ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಮಡಿಕೇರಿ ಜಿಲ್ಲಾ ರಕ್ತನಿಧಿ ಕೇಂದ್ರದ ಡಯಾನ, ಸುನೀಲ್, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಜರಿದ್ದರು.