ಕೂಡಿಗೆ, ಜ. 15: ಶಾಲಾ ಹಂತದಲ್ಲಿ ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಆಗಿಂದಾಗ್ಗೆ ಶಾಲೆಗಳಿಗೆ ಪೋಷಕರು ಭೇಟಿ ನೀಡಿ ತಮ್ಮ ಮಕ್ಕಳ ಚಲನವಲನಗಳ ಬಗ್ಗೆ ಹೆಚ್ಚು ಗಮನ ಹರಿಸಿ, ಶಿಕ್ಷಣದಲ್ಲಿ ಹೆಚ್ಚು ಒತ್ತು ನೀಡಿ ಪ್ರೋತಾಹಿಸಿದ್ದಲ್ಲಿ ವಿದ್ಯಾರ್ಥಿ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ಶಾಸಕ ಎಂ. ಪಿ. ಅಪ್ಪಚ್ಚುರಂಜನ್ ಹೇಳಿದರು.

ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಾರ್ಷಿಕೋತ್ಸವ ಹಾಗೂ ದಶಮಾನೋತ್ಸವ-2018 ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೋಷಕರು, ಶಿಕ್ಷಕರು ಮತ್ತು ಶಾಲಾ ಆಡಳಿತ ವ್ಯವಸ್ಥೆ ಇವುಗಳ ಸಹಕಾರದಲ್ಲಿ ವಿದ್ಯಾರ್ಥಿಗಳು ತಮ್ಮ ಜ್ಞಾನ ವೃದ್ಧಿಸಿಕೊಳ್ಳಲು ಶಿಕ್ಷಣ ಸಂಸ್ಥೆ ಅವಕಾಶ ನೀಡಬೇಕು. ಶಿಕ್ಷಕರು ತರಗತಿಗಳಲ್ಲಿ ವಿದ್ಯಾರ್ಥಿಗಳ ಜ್ಞಾನವೃದ್ಧಿಗೆ ಶ್ರಮಿಸಿದರೆ ಪೋಷಕರು ತಮ್ಮ ಮಕ್ಕಳಲ್ಲಿ ಉತ್ತಮ ಗುಣಗಳನ್ನು ತುಂಬುವ ಮೂಲಕ ಅವರ ಭವಿಷ್ಯವನ್ನು ರೂಪಿಸಬೇಕು ಎಂದರು.

ಸಮಾರಂಭವನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್ ಮಾತನಾಡಿ, ವಿದ್ಯಾರ್ಥಿಗಳು ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಜ್ಞಾನವೃದ್ಧಿಯ ಜೊತೆ ದೈಹಿಕ ಸಾಮಥ್ರ್ಯವನ್ನು ಸಮತೋಲನದಲ್ಲಿಟ್ಟುಕೊಂಡಲ್ಲಿ ತನ್ನ ಮುಂದಿನ ಗುರಿಯನ್ನು ತಲುಪಲು ಉತ್ತಮ ದಾರಿಯನ್ನು ಕಂಡುಕೊಳ್ಳ ಬೇಕು ಎಂದರು. ಕುಶಾಲನಗರದ ಖ್ಯಾತ ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ ಶಾಲೆಯ ಸಂಚಿಕೆ ಬಿಡುಗಡೆ ಮಾಡಿದರು. ಭಾಷಣಕಾರ ರಾಗಿ ಬಾಳೆಲೆ ವಿಜಯಲಕ್ಷ್ಮಿ ಪ.ಪೂ ಕಾಲೇಜಿನ ಉಪನ್ಯಾಸಕ ಡಾ. ಜೆ. ಸೋಮಣ್ಣ ಮಾತನಾಡಿದರು.

ವೇದಿಕೆಯಲ್ಲಿ ಕೊಡಗು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಎಂ.ಕೆ.ವಿಜು ಸುಬ್ರಮಣಿ, ಜಿ.ಪಂ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಮೂಕೊಂಡ ಪಿ.ಸುಬ್ರಮಣಿ, ಜಿ.ಪಂ ಸದಸ್ಯೆ ಮಂಜುಳಾ, ಸೋಮವಾರಪೇಟೆ ತಾ.ಪಂ ಅಧ್ಯಕ್ಷೆ ಪುಷ್ಪಾರಾಜೇಶ್, ಸದಸ್ಯರಾದ ಡಿ.ಎಸ್.ಗಣೇಶ್, ಜಿಲ್ಲಾ ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಅಧ್ಯಕ್ಷ ಕೆ.ವಿ.ಸುರೇಶ್, ಕೂಡಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪ್ರೇಮಲೀಲಾ, ಕೂಡುಮಂಗಳೂರು ಗ್ರಾ.ಪಂ ಸದಸ್ಯೆ ಜ್ಯೋತಿ ಪ್ರಮೀಳ, ಹಿರಿಯ ಶಿಕ್ಷಕÀ ಶಿವರಾಜ್, ಶಾಲೆಯ ಪ್ರಾಂಶುಪಾಲ ಕೆ.ಪ್ರಕಾಶ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಇದ್ದರು. ವೇದಿಕೆಯ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.